ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಕಿಂ: ಭೂಕಂಪ ಪೀಡಿತರಿಗೆ ಆಹಾರ ಪೊಟ್ಟಣ ಪೂರೈಕೆ

Last Updated 23 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಟುಂಗ್ (ಸಿಕ್ಕಿಂ), (ಪಿಟಿಐ): ಇನ್ನಷ್ಟು ಹೊಸ ಭೂಕಂಪನ ಮತ್ತು ಭೂಕುಸಿತದ ಹೆದರಿಕೆಯ ಹಿನ್ನೆಲೆಯಲ್ಲಿ ಇಲ್ಲಿನ ಭೂಕಂಪ ಪೀಡಿತ ಪ್ರದೇಶದಿಂದ ಜನ ದೂರದ ಜಾಗಗಳಿಗೆ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ಭೂಕಂಪದಲ್ಲಿ ಸತ್ತವರ ಸಂಖ್ಯೆ 118ಕ್ಕೆ ಏರಿದೆ.

ಪ್ರಬಲ ಭೂಕಂಪದಿಂದ ನಿರ್ಗತಿಕರಾದವರಿಗೆ ಹತ್ತು ಸಾವಿರಕ್ಕೂ ಹೆಚ್ಚಿನ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ, ಇನ್ನೂ ಐದು ಸಾವಿರ ಪೊಟ್ಟಣಗಳನ್ನು ಕಳುಹಿಸಲಾಗುತ್ತದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ನಿರಾಶ್ರಿತರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳು ದೊರೆಯುವಂತೆ ಮಾಡುವ ಸಲುವಾಗಿ ರಾಜ್ಯದುದ್ದಕ್ಕೂ 100ಕ್ಕೂ ಹೆಚ್ಚು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಕರ್ಮಾ ಗ್ಯಾತ್ಸೊ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT