ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಗದ ವಿದ್ಯಾರ್ಥಿ ವೇತನ; ವಿದ್ಯಾರ್ಥಿಗಳ ಪ್ರತಿಭಟನೆ

Last Updated 22 ಜನವರಿ 2011, 8:40 IST
ಅಕ್ಷರ ಗಾತ್ರ

ಚಿಂತಾಮಣಿ: ನಗರದ ಸರ್ಕಾರಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಾಜಕಲ್ಯಾಣ ಇಲಾಖೆಯು ವಿದ್ಯಾರ್ಥಿ ವೇತನವನ್ನು ಸಮರ್ಪಕವಾಗಿ ವಿತರಿಸುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿನಿಯರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿ ವೇತನ ನೀಡಿಲ್ಲ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಸೂಕ್ತವಾದ ಉತ್ತರವನ್ನು ನೀಡದೆ ಬೇಜವಾಬ್ದಾರಿಯಿಂದ ಮಾತನಾಡುತ್ತಾರೆ. ವಿದ್ಯಾರ್ಥಿ ವೇತನಕ್ಕಾಗಿ ಸಮಾಜಕಲ್ಯಾಣ ಇಲಾಖೆಗೆ ಅಲೆದು ಅಲೆದು ಸಾಕಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು.

ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡಬೇಕು. ಆದರೆ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿ ವೇತನವನ್ನು ನೀಡದೆ ವಂಚಿಸುತ್ತಿದ್ದಾರೆ ಎಂದರು.

ಮನವಿಯನ್ನು ಸ್ವೀಕರಿಸಿದ ತಹಶೀಲ್ದಾರ್ ಕೃಷ್ಣಮೂರ್ತಿ ಸೂಕ್ತಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಮಂಜುನಾಥರೆಡ್ಡಿ, ವಿವೇಕ್, ಸುರೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT