ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ನಿವೃತ್ತಿಗೆ ಇನ್ನು ಏಳು ವರ್ಷ

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮುಂದಿನ ವಿಧಾನ ಸಭಾ ಚುನಾವಣೆಗೆ ಮಾತ್ರ ಸ್ಪರ್ಧಿಸುತ್ತೇನೆ. ಆ ನಂತರ ಚುನಾವಣಾ ಕಣಕ್ಕೆ ಇಳಿಯುವುದಿಲ್ಲ~ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ಇಲ್ಲಿ ತಿಳಿಸಿದರು. ಈ ಮೂಲಕ ಏಳು ವರ್ಷಗಳಲ್ಲಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುವ ಇಂಗಿತ ವ್ಯಕ್ತಪಡಿಸಿದರು.

`ಅವಧಿಗೂ ಮೊದಲೇ ವಿಧಾನ ಸಭೆಗೆ ಚುನಾವಣೆ ನಡೆಯುವುದು ಖಚಿತ. ಬಿಜೆಪಿ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ. ನನ್ನ ಪ್ರಕಾರ ಬರುವ ಏಪ್ರಿಲ್- ಮೇ ತಿಂಗಳ ನಂತರ ಚುನಾವಣೆ ನಡೆಯಲಿದ್ದು, ಒಂದು ಬಾರಿ ಮಾತ್ರ ವಿಧಾನ ಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಮಾನಸಿಕವಾಗಿ ತಯಾರಾಗಿದ್ದೇನೆ~ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ನನಗೂ ವಯಸ್ಸಾಯಿತು. ದೈಹಿಕವಾಗಿ ಸಮರ್ಥನಿಲ್ಲದ ಕಾರಣ ಹೆಚ್ಚು ವರ್ಷ ರಾಜಕಾರಣ ಮಾಡಲು ಆಗುವುದಿಲ್ಲ. ಶಕ್ತಿ ಇರುವವರು 80 ವರ್ಷ ಬೇಕಾದರೂ ರಾಜಕಾರಣ ಮಾಡಲಿ,  ಆದರೆ ನನ್ನಿಂದ ಸಾಧ್ಯವಿಲ್ಲ. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಂದರ್ಭ ಬಂದರೆ ಕೊಪ್ಪಳ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತೇನೆ~ ಎಂದು ಅವರು ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT