ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದು ಫ್ಲೆಕ್ಸ್ ವಿರೂಪ: ದಿಢೀರ್ ಪ್ರತಿಭಟನೆ

Last Updated 15 ನವೆಂಬರ್ 2011, 8:00 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾವಚಿತ್ರ ಇದ್ದ ಫ್ಲೆಕ್ಸ್‌ನ್ನು ಕಿಡಿಗೇಡಿಗಳು ಹರಿದು ವಿರೂಪಗೊಳಿಸಿದ ಪ್ರಕರಣ ಪಟ್ಟಣದಲ್ಲಿ ನಡೆದಿದ್ದು, ಕೃತ್ಯವನ್ನು ಖಂಡಿಸಿ ಕುರುಬ ಸಮಾಜದ ಕಾರ್ಯಕರ್ತರು ಸೋಮವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಬೆಂಗಳೂರು- ಮೈಸೂರು ಹೆದ್ದಾರಿ ವೃತ್ತದಲ್ಲಿ 10 ನಿಮಿಷಗಳ ಕಾಲ ಪ್ರತಿಭಟನೆ ನಡೆಯಿತು. ಕನಕ ಜಯಂತಿ ಅಂಗವಾಗಿ ಅಂಚೆ ಕಚೇರಿ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ಕುರುಬ ಸಮಾಜದವರು ಹೆದ್ದಾರಿಯಲ್ಲಿ ದಿಢೀರ್ ಪ್ರತಿಭಟನೆ ಆರಂಭಿಸಿದರು.

ಇದರಿಂದ ಮೆರವಣಿಗೆಯಲ್ಲಿ ಬರುತ್ತಿದ್ದ ಶಾಸಕ ರಮೇಶ ಬಂಡಿಸಿದ್ದೇಗೌಡ, ತಹಶೀಲ್ದಾರ್ ಅರುಳ್‌ಕುಮಾರ್ ಇತರರು ಅವಕ್ಕಾದರು. ಸಿದ್ದರಾಮಯ್ಯ ಭಾವಚಿತ್ರ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ.ನಾಗರಾಜು ಇತರರು ಆಗ್ರಹಿಸಿದರು. ಪೊಲೀಸರ ವಿರುದ್ಧ ಘೋಷಣೆಯನ್ನೂ ಕೂಗಿದರು.

ಕನಕ ಜಯಂತಿ ಹಿನ್ನೆಲೆಯಲ್ಲಿ ತಾಲ್ಲೂಕಿನ ಶಾಂತಿಕೊಪ್ಪಲು ಗ್ರಾಮದ ಕುರುಬ ಜನಾಂಗದವರು ಬೆಂಗಳೂರು- ಮೈಸೂರು ಹೆದ್ದಾರಿ ವೃತ್ತದಲ್ಲಿ ಸಿದ್ದರಾಮಯ್ಯ, ಶಾಸಕ ರಮೇಶ ಬಂಡಿಸಿದ್ದೇಗೌಡ ಮತ್ತು ಕನಕದಾಸರ ಭಾವಚಿತ್ರಗಳನ್ನು ಒಳಗೊಂಡ ಫ್ಲೆಕ್ಸ್ ಹಾಕಿದ್ದರು.

ಫ್ಲೆಕ್ಸ್‌ನಲ್ಲಿದ್ದ ಸಿದ್ದರಾಮಯ್ಯ ಅವರ ಚಿತ್ರದ ಮುಖದ ಭಾಗವನ್ನು ಹರಿದು ಹಾಕಲಾಗಿತ್ತು. ಇದರಿಂದ ರೊಚ್ಚಿಗೆದ್ದ ಕುರುಬ ಸಮಾಜದ ಚನ್ನಬಸವಯ್ಯ, ಸಿದ್ದಮಾದಯ್ಯ, ಹೊನ್ನೇಗೌಡ, ಚನ್ನೇಗೌಡ, ಮರೀಗೌಡ ಇತರರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಿಲ್ಲಿಸಿ ಅಂಬೇಡ್ಕರ್ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂದು ಶಾಸಕರು ಮಾಡಿದ ಮನವಿ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.

  ಖಂಡನೆ: ಸಿದ್ದರಾಮಯ್ಯ ಅವರ ಭಾವಚಿತ್ರ ಇದ್ದ ಫ್ಲೆಕ್ಸ್ ವಿರೂಪಗೊಳಿಸಿರುವ ಕೃತ್ಯವನ್ನು ಕಾಂಗ್ರೆಸ್ ಮುಖಂಡ ಅಂಬರೀಶ್‌ಗೌಡ (ಎಂ.ಭಾಸ್ಕರ್) ಖಂಡಿಸಿದ್ದಾರೆ. ಕಿಡಿಗೇಡಿ ಗಳನ್ನು ಪೊಲೀಸರು ಶೀಘ್ರ ಬಂಧಿಸಿ ವಿಚಾರಣೆಗೆ ಒಳ ಪಡಿಸಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆ ಎದುರು ಪ್ರತಿ ಭಟನೆ ಹಮ್ಮಿಕೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT