ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದೇಶ್ವರಸ್ವಾಮಿ ರಥೋತ್ಸವ

Last Updated 25 ಫೆಬ್ರುವರಿ 2012, 5:10 IST
ಅಕ್ಷರ ಗಾತ್ರ

ಬಸವಾಪಟ್ಟಣ: ಇತಿಹಾಸ ಪ್ರಸಿದ್ಧ ಸೂಳೆಕೆರೆಯ ಸಿದ್ದೇಶ್ವರಸ್ವಾಮಿ ರಥೋತ್ಸವ ಶುಕ್ರವಾರ ಮುಂಜಾನೆ ವಿಜೃಂಭಣೆಯಿಂದ ನೆರವೇರಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ಸ್ವಾಮಿಗೆ ಪೂಜೆ ಸಲ್ಲಿಸಿದರು.

ಪ್ರತಿವರ್ಷದ ಸಂಪ್ರದಾಯದಂತೆ ಹರಿಹರ ತಾಲ್ಲೂಕಿನ ಬಾತಿ ಗ್ರಾಮದ ರೇವಣಸಿದ್ದೇಶ್ವರ ಸ್ವಾಮಿ ಮತ್ತು ಬೀರಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗಳೊಂದಿಗೆ ಬುಧವಾರ ರಾತ್ರಿ ಆಗಮಿಸಿದ್ದ ಭಕ್ತ ಸಮೂಹ, ಸೂಳೆಕೆರೆ ಸಿದ್ದೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿತು.
 
ಗುರುವಾರ ಎರಡೂ ದೇವತಾ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರ ಬಾಳೆಹಣ್ಣು, ಉತ್ತತ್ತಿ, ಕೊಬ್ಬರಿ, ಹೂವು, ಮಂತ್ರಾಕ್ಷತೆಗಳನ್ನು ರಥದ ಮೇಲೆ ಎರಚಿ ಭಕ್ತಿ ಪ್ರದರ್ಶಿಸಿದರು. ಆಗಮಿಸಿದ ಭಕ್ತರು ಪ್ರಸಾದವನ್ನು ಸಿದ್ಧಪಡಿಸಿ ಸ್ವಾಮಿಗೆ ನೈವೇದ್ಯ ಮಾಡಿ ಭೋಜನ ಮಾಡುವುದು ಪದ್ಧತಿಯಾಗಿದೆ. ಭಕ್ತರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಚನ್ನಗಿರಿ ತಹಶೀಲ್ದಾರ್ ರೇವಣಸಿದ್ದಪ್ಪ ಮತ್ತಿತರರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT