ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ: ರಾಜ್ಯದ ಅಮೋಘ ಸಾಧನೆ

Last Updated 21 ಮೇ 2012, 19:35 IST
ಅಕ್ಷರ ಗಾತ್ರ

ಬೆಂಗಳೂರು: ಸಿಬಿಎಸ್‌ಇ ಪಠ್ಯಕ್ರಮದ ಹತ್ತನೇ ತರಗತಿಯ ದಕ್ಷಿಣ ಪ್ರಾಂತ್ಯದ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕರ್ನಾಟಕದ ವಿದ್ಯಾರ್ಥಿಗಳು ಶೇಕಡ 99.73ರಷ್ಟು ಅಮೋಘ ಸಾಧನೆ ಮಾಡಿದ್ದಾರೆ.
ಈ ಬಾರಿ ರಾಜ್ಯದ 19,460 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

ಎಂದಿನಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಪಡೆದಿದ್ದು ಶೇಕಡ 99.75ರಷ್ಟು ಸಾಧನೆ ಮಾಡಿದ್ದರೆ, ಹುಡುಗರು 99.6ರಷ್ಟು ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಸಿಬಿಎಸ್‌ಇ ಚೆನ್ನೈ ಪ್ರಾಂತ್ಯದ ಜಂಟಿ ಕಾರ್ಯದರ್ಶಿ ಡಿ.ಟಿ.ಶ್ರೀಧರನ್  `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

 ರಾಜ್ಯದ ಸಿಬಿಎಸ್‌ಇ ಪಠ್ಯಕ್ರಮದ ವಿದ್ಯಾರ್ಥಿಗಳು ಕಳೆದ ವರ್ಷ ಮಾಡಿದ ಸಾಧನೆ 99.66ರಷ್ಟಿತ್ತು. ಈ ಬಾರಿ ಅದು 99.73ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT