ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಕಾಂಗ್ರೆಸ್ ಕೈಗೊಂಬೆ: ಸಿಎಂ

Last Updated 17 ಡಿಸೆಂಬರ್ 2012, 6:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಕೇಂದ್ರದಲ್ಲಿ ಆಡಳಿತದಲ್ಲಿ ರುವ ಯುಪಿಎ ಸರ್ಕಾರದ ನೇತೃತ್ವ ದಲ್ಲಿನ ಕಾಂಗ್ರೆಸ್ ಪಕ್ಷದ ಕೈಗೊಂಬೆ ಯಾಗಿ ಸಿಬಿಐ ವರ್ತಿಸುತ್ತಿದೆ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು.

ನಗರದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, `ಈ ಕಾರಣಕ್ಕೆ ಹಿಂದಿನಿಂದಲೂ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ. ಸಿಬಿಐ ಮಾಜಿ ನಿರ್ದೇಶಕ ಜೋಗಿಂದರ್ ಸಿಂಗ್ ಇತ್ತೀಚೆಗೆ ನೀಡಿರುವ ಹೇಳಿಕೆ ಈ ಆರೋಪವನ್ನು ಇನ್ನಷ್ಟು ಪುಷ್ಟೀಕರಿಸುತ್ತದೆ' ಎಂದರು.

`ಭ್ರಷ್ಟಾಚಾರದ ಹಲವು ಪ್ರಕರಣಗ ಳಿದ್ದರೂ ಅವುಗಳ ತನಿಖೆಗೆ ಸಿಬಿಐ ಮುಂದಾಗುತ್ತಿಲ್ಲ. ಆದರೆ ಕಾಂಗ್ರೆಸ್  ವಿರೋಧ ಪಕ್ಷಗಳ ವಿರುದ್ಧ ಸಿಬಿಐ ಅನ್ನು ಅಸ್ತ್ರವಾಗಿ ಬಳಸುತ್ತಿದೆ' ಎಂದು ಟೀಕಿಸಿದರು.
ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, `ಈಗಾಗಲೇ ಈಶ್ವರಪ್ಪ ಆಸ್ತಿ ಘೊಷಣೆ ಮಾಡಿ ಕೊಂಡಿದ್ದಾರೆ.

ಆದರೂ ತನಿಖೆಯನ್ನು ಸ್ವಾಗತಿಸುತ್ತೇನೆ. ಇದರಿಂದ ಸತ್ಯ ಮತ್ತೊಮ್ಮೆ ಬಯಲಿಗೆ ಬರುತ್ತದೆ' ಎಂದರು.
`ಕಾವೇರಿ ನದಿ ಪ್ರಾಧಿಕಾರ (ಸಿಆರ್‌ಎ) ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ಮತ್ತು ಕಾವೇರಿ ಮಾನಿಟರಿಂಗ್ ಕಮಿಟಿ (ಸಿಎಂಸಿ) ಮುಖ್ಯಸ್ಥರಾಗಿರುವ ಕೇಂದ್ರ ಜಲಸಂಪನ್ಮೂಲ ಕಾರ್ಯದರ್ಶಿಯಿಂದ ರಾಜ್ಯಕ್ಕೆ ಅನ್ಯಾಯವಾಗಿದೆ.

ನಮ್ಮ ಸರ್ಕಾರವಂತಲ್ಲ, ಈ ಹಿಂದಿನಿಂದಲೂ ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯ ಮುಂದುವರಿದಿದೆ' ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT