ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ತನಿಖೆಗೆ ವಹಿಸಲು ಶಿಫಾರಸು

ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರ
Last Updated 17 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮಂಗಳೂರು: ‘ಮಂಡ್ಯ ಮತ್ತು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ­ಗಳಲ್ಲಿ ನಡೆದ ಹಣ ದುರುಪಯೋಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಗರಾಭಿ­ವೃದ್ಧಿ ಇಲಾಖೆ ಶಿಫಾರಸು ಮಾಡಿದೆ. ಈ ಕುರಿತ ಕಡತವನ್ನು ಗೃಹ ಸಚಿವರಿಗೆ ಕಳುಹಿಸಿಕೊಡ­ಲಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್‌ ಸೊರಕೆ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ­ನಿರತ ಪತ್ರಕರ್ತರ ಸಂಘದ ಆಶ್ರಯ­ದಲ್ಲಿ ಮಂಗಳವಾರ ಪ್ರೆಸ್‌ಕ್ಲಬ್‌­ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಅವರು ಮಾತನಾಡಿದರು.

‘ಈ ಎರಡೂ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದ ಅವ್ಯವಹಾರವು ರೂ. 2 ಕೋಟಿಗೂ ಹೆಚ್ಚಿನದು. ಹಾಗಾಗಿ ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಇಲಾಖೆ ಶಿಫಾರಸು ಮಾಡಿದೆ. ಪ್ರಕರಣದ ಆರೋಪಿಗಳನ್ನು ಅಮಾನತು ಮಾಡಿದ್ದು, ಅವರು ಜೈಲಿನಲ್ಲಿದ್ದಾರೆ’ ಎಂದು ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT