ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಿಬಿಐನಲ್ಲಿ ಹಸ್ತಕ್ಷೇಪ ಮಾಡಿಲ್ಲ'

Last Updated 15 ಡಿಸೆಂಬರ್ 2012, 19:54 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತನಿಖೆಯಲ್ಲಿ ರಾಜಕೀಯ ಒತ್ತಡ ಎದುರಿಸಬೇಕಾಯಿತು' ಎಂದು ಸಿಬಿಐ ಮಾಜಿ ನಿರ್ದೇಶಕ ಯು.ಎಸ್.ಮಿಶ್ರಾ ಮಾಡಿದ ಆರೋಪವನ್ನು ಸರ್ಕಾರ ಶನಿವಾರ ತಳ್ಳಿಹಾಕಿದೆ.

`ಸಿಬಿಐ ಸ್ವತಂತ್ರ ಸಂಸ್ಥೆಯಾಗಿದ್ದು, ಅದರ ಅಧಿಕಾರದಲ್ಲಿ ನಾವು ಹಸ್ತಕ್ಷೇಪ ಮಾಡಿಲ್ಲ' ಎಂದು ಪ್ರಧಾನಿ ಕಚೇರಿಯ ರಾಜ್ಯ ಸಚಿವ ವಿ.ನಾರಾಯಣ ಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಕಾನೂನು ಸಚಿವ ಅಶ್ವಿನಿ ಕುಮಾರ್ ಕೂಡ ಮಿಶ್ರಾ ಆರೋಪವನ್ನು ನಿರಾಕರಿಸಿದ್ದಾರೆ.
`ಮಿಶ್ರಾ ಅವರು ಎನ್‌ಡಿಎ ಆಡಳಿತದಲ್ಲಿ ಸಿಬಿಐ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಹಾಗಾಗಿ ಅವರ ಆರೋಪಗಳಿಗೆ ಬಿಜೆಪಿ ಉತ್ತರ ನೀಡಬೇಕು' ಎಂದು ಸಂಸದೀಯ ವ್ಯವಹಾರ ರಾಜ್ಯ ಸಚಿವ ರಾಜೀವ್ ಶುಕ್ಲಾ ಹೇಳಿದ್ದಾರೆ.

ಬಿಜೆಪಿ ಆರೋಪ: `ಸಿಬಿಐಯನ್ನು ಕಾಂಗ್ರೆಸ್ ತನಿಖಾ ದಳವಾಗಿ ಪರಿವರ್ತಿಸಲಾಗಿದೆ' ಎಂದು ಬಿಜೆಪಿ ಹಿರಿಯ ಮುಖಂಡ ವೆಂಕಯ್ಯ ನಾಯ್ಡು  ಸಂಸತ್ ಭವನದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಮಿಶ್ರಾ ಅವರು ಎನ್‌ಡಿಐ ಅವಧಿಯಲ್ಲಿ ಸಿಬಿಐ ನಿರ್ದೇಶಕರಾಗಿದ್ದರು ಎಂದು ಕಾಂಗ್ರೆಸ್ ಮಾಡಿರುವ ಆರೋಪ ಕುರಿತು ಕೇಳಿದ ಪ್ರಶ್ನೆಗೆ, `ಸಿಬಿಐನ ನಿರ್ದೇಶಕರಾಗಿದ್ದ ಜೊಗಿಂದರ್ ಸಿಂಗ್ ಕೂಡ ಮಿಶ್ರಾ ಅವರಂತೆಯೇ ಆರೋಪ ಮಾಡಿದ್ದರು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT