ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಯಾ: 9 ಜನರ ಬಲಿ

Last Updated 17 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನಿಕೋಸಿಯಾ (ಎಎಫ್‌ಪಿ): ಅಧ್ಯಕ್ಷ ಬಷರ್ ಅಲ್ ಹಸದ್ ಅವರ ಆಡಳಿತ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಭರದಲ್ಲಿ ಸಿರಿಯಾ ರಕ್ಷಣಾ ಪಡೆಗಳು ನಡೆಸಿರುವ ಗುಂಡಿನ ದಾಳಿಗೆ 9 ಜನ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮಾನವ ಹಕ್ಕುಗಳ ಕಾವಲು ಸಮಿತಿಯ ಜಿಯಾದ್ ಅಲ್ ಒಬೈದಿ `ಇ ಮೇಲ್~ ಸಂದೇಶವೊಂದರಲ್ಲಿ ತಿಳಿಸಿದ್ದಾರೆ.

ದಿಯರ್ ಎಜ್ಜಾರ್ ಪ್ರಾಂತ್ಯದಲ್ಲಿ ಪ್ರತಿಭಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಶವ ಸಂಸ್ಕಾರದಲ್ಲಿ ಪಾಲ್ಗೊಂಡ ಜನರ ಮೇಲೂ ಸಿರಿಯಾ ರಕ್ಷಣಾ ಪಡೆಗಳು ಗುಂಡಿನ ದಾಳಿ ನಡೆಸಿವೆ.

ಆಗ್ರಹ: (ಕೈರೊ ವರದಿ): ಅರಬ್ ಲೀಗ್ ರಾಷ್ಟ್ರಗಳ ಪಟ್ಟಿಯಲ್ಲಿನ ಸಿರಿಯಾದ ಮಾನ್ಯತೆಯನ್ನು ಅಮಾನತುಗೊಳಿಸಲು ಹಲವು ಸದಸ್ಯ ರಾಷ್ಟ್ರಗಳು ಒತ್ತಾಯಿಸಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT