ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಖ್‌ರಾಂ ಜಾಮೀನು ಅರ್ಜಿ ವಿಚಾರಣೆ ಇಂದು

Last Updated 15 ಜನವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 1993ರ ಟೆಲಿಕಾಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸುಖ್‌ರಾಂ ಮತ್ತು ಇನ್ನಿಬ್ಬರ ಜಾಮೀನು ಅರ್ಜಿ ಸೋಮವಾರ ಸುಪ್ರೀಂಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಶಿಕ್ಷೆಗೆ ಒಳಗಾಗಿರುವ ಸುಖ್‌ರಾಂ ವಿಚಾರಣಾ ನ್ಯಾಯಾಲಯಕ್ಕೆ ಶರಣಾದ ಬಳಿಕ ನ್ಯಾಯಮೂರ್ತಿ ಪಿ. ಸದಾಶಿವನ್ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಜ. 9ರಂದು ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.

ಈ ಆರೋಪಿಗಳ ಮಧ್ಯಂತರ ಜಾಮೀನಿನ ಅವಧಿ ಸೋಮವಾರ ಮುಕ್ತಾಯಗೊಳ್ಳಲಿದೆ. ಈ ಪ್ರಕರಣದಲ್ಲಿ ಸಹ ಆರೋಪಿಗಳಾಗಿರುವ ನಿವೃತ್ತ ಐಎಎಸ್ ಅಧಿಕಾರಿ ರಾನು ಘೋಷ್ ಹಾಗೂ ಹೈದರಾಬಾದ್ ಮೂಲದ ಪಿ. ರಾಮ ರಾವ್ ಅವರಿಗೂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT