ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದ್ದಿ ವಾಹಿನಿ ವಿರುದ್ಧ ಹಕ್ಕುಚ್ಯುತಿ ಆರೋಪ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸತ್ಯಕ್ಕೆ ದೂರವಾದ ವರದಿಯನ್ನು ಪ್ರಕಟಿಸುವ ಮೂಲಕ ತಮ್ಮ ಘನತೆಗೆ ಚ್ಯುತಿ ಉಂಟು ಮಾಡಿ, ಶಾಸಕರಾಗಿ ಕರ್ತವ್ಯ ನಿರ್ವಹಿಸಲು ತೊಂದರೆ ನೀಡಿದ ಆರೋಪದ ಮೇಲೆ `ಜನಶ್ರೀ~ ಸುದ್ದಿವಾಹಿನಿ ವಿರುದ್ಧ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಸಲ್ಲಿಸಿರುವ ದೂರನ್ನು ಸ್ಪೀಕರ್ ಕೆ.ಜಿ.ಬೋಪಯ್ಯ ಸದನದ ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಿದ್ದಾರೆ.

 ಗುರುವಾರ ಈ ಬಗ್ಗೆ ಸ್ಪೀಕರ್ ಅವರಿಗೆ ದೂರು ಸಲ್ಲಿಸಿದ ರವಿ, `ಭೂ ಕಬಳಿಕೆ ಮತ್ತು ಭ್ರಷ್ಟಾಚಾರ ಆರೋಪ ಮೇಲೆ ಮೂರು ದಿನಗಳ ಕಾಲ ನನ್ನ ವಿರುದ್ಧ ಈ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿದೆ. ನನ್ನ ಪ್ರತಿಕ್ರಿಯೆಯನ್ನು ಪ್ರಕಟಿಸಿಲ್ಲ.
 
ರಾಜಕೀಯ ವೈರಿಗಳು ಈ ಸಂಚಿನ ಹಿಂದಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಸುಳ್ಳು ಆರೋಪ ಮಾಡುವ ಮೂಲಕ ನನ್ನ ಗೌರವಕ್ಕೆ ಧಕ್ಕೆ ಉಂಟು ಮಾಡಲಾಗಿದೆ.ಶಾಸಕನಾಗಿ ಕರ್ತವ್ಯ ನಿರ್ವಹಿಸದಂತೆ ಭಯ ಸೃಷ್ಟಿಸಲಾಗಿದೆ. ಇಂತಹ ಸುದ್ದಿ ವಾಹಿನಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು~ ಎಂದು ಕೋರಿದರು.

ಸುದ್ದಿ ವಾಹಿನಿ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ವಿರೋಧಿಸಿದ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ರೇವಣ್ಣ, `ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತದೆ~ ಎಂದರು. ಆದರೆ ಕಾಂಗ್ರೆಸ್‌ನ ಡಾ.ಎಂ.ಸಿ.ಸುಧಾಕರ್ ಅವರು ರವಿಯವರನ್ನು ಬೆಂಬಲಿಸಿದರು. ಕಾನೂನು ಸಚಿವ ಸುರೇಶ್‌ಕುಮಾರ್ ಈ ದೂರನ್ನು ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸಲು ಸೂಚಿದರು.ಬಳಿಕ ಸ್ಪೀಕರ್ ದೂರನ್ನು ಸಮಿತಿಗೆ ವರ್ಗಾಯಿಸಿರುವುದಾಗಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT