ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧೀಂದ್ರ ಕುಲಕರ್ಣಿಗೆ ಜಾಮೀನು ನಕಾರ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವೋಟಿಗಾಗಿ ನೋಟು ಪ್ರಕರಣದ ಆರೋಪಿ ಸುಧೀಂದ್ರ ಕುಲಕರ್ಣಿ ಅವರಿಗೆ ಜಾಮೀನು  ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.

ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಆಪ್ತರಾಗಿದ್ದ ಕುಲಕರ್ಣಿ ಜತೆಗೆ ಇಬ್ಬರು ಮಾಜಿ ಸಂಸದರಾದ ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಮಹಾವೀರ್ ಸಿಂಗ್ ಭಗೋರ ಅವರಿಗೂ ಕೋರ್ಟ್ ಜಾಮೀನು ನಿರಾಕರಿಸಿದೆ.

ಲಂಚ ತೆಗೆದುಕೊಂಡ ನಂತರ ಸಂಬಂಧಿಸಿದ ಯಾವುದಾದರೊಂದು ತನಿಖಾ ಸಂಸ್ಥೆಗೆ ಹಗರಣ ಕುರಿತು ತಿಳಿಸಲು ಆರೋಪಿಗಳಿಗೆ ಸಾಕಷ್ಟು ಸಮಯಾವಕಾಶ ಇತ್ತು. ಹಾಗೆ ಮಾಡದ ಮೂಲಕ ಆರೋಪಿಗಳು ಗಂಭೀರ ಅಪರಾಧ ಎಸಗಿದ್ದಾರೆ ಎಂದು ನ್ಯಾಯಾಧೀಶೆ ಸಂಗೀತಾ ದಿಂಗ್ರಾ ಸೆಹಗಲ್ ಹೇಳಿದರು.

ಕುಲಕರ್ಣಿ ಈ ಹಗರಣದ ಸೂತ್ರಧಾರರು. ಪಿತೂರಿದಾರರೊಂದಿಗೆ ಅವರು ನಿರಂತರ ಸಂಪರ್ಕದಲ್ಲಿದ್ದರು. ಬಿಜೆಪಿ ಸಂಸದರಿಗೆ ಲಂಚ ನೀಡಿದಾಗಲೂ ಅವರು ಉಪಸ್ಥಿತರಿದ್ದರು ಎಂದು ದೆಹಲಿ ಅಪರಾಧ ವಿಭಾಗ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

ಭಾರತೀಯ ದಂಡ ಸಂಹಿತೆಯ 120-ಬಿ ಕಲಂ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಕುಲಕರ್ಣಿ ವಿರುದ್ಧ ಆರೋಪ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT