ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ: ಮೊದಲ ಬಾರಿಗೆ ಇಬ್ಬರು ಮಹಿಳಾ ನ್ಯಾಯಮೂರ್ತಿಗಳು

Last Updated 13 ಸೆಪ್ಟೆಂಬರ್ 2011, 10:45 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಒಬ್ಬ ಮಹಿಳೆ ಸೇರಿದಂತೆ ಮೂವರು ನ್ಯಾಯಮೂರ್ತಿಗಳು ಮಂಗಳವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ಇದೇ ಮೊತ್ತ ಮೊದಲ ಬಾರಿಗೆ ಸುಪ್ರೀಂಕೋರ್ಟಿನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಎರಡಕ್ಕೆ ಏರಿತು.

ನ್ಯಾಯಮೂರ್ತಿಗಳಾದ ಸುಧಾಂಶು ಜ್ಯೋತಿ ಮುಖೋಪಾಧ್ಯಾಯ, ರಂಜನಾ ಪ್ರಕಾಶ ದೇಸಾಯಿ, ಜಗದೀಶ ಸಿಂಗ್ ಖೇಹರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಎಚ್. ಎಸ್. ಕಪಾಡಿಯಾ ಪ್ರಮಾಣ ವಚನ ಬೋಧಿಸಿದರು. ಮೂವರ ಸೇರ್ಪಡೆಯೊಂದಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 26ರಿಂದ 29ಕ್ಕೆ ಏರಿತು.

ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಗುಜರಾತ್ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿದ್ದರೆ, ನ್ಯಾಯಮೂರ್ತಿ ದೇಸಾಯಿ ಅವರು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಖೇಹರ್ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ಸುಪ್ರೀಂಕೋರ್ಟಿಗೆ 1989ರಲ್ಲಿ ಮೊದಲ ಮಹಿಳಾ ನ್ಯಾಯಮೂರ್ತಿ ನೇಮಕಗೊಂಡಿದ್ದರೂ, ನ್ಯಾಯಮೂರ್ತಿ ದೇಸಾಯಿ ಅವರ ನೇಮಕದೊಂದಿಗೆ ಒಂದೇ ಪೀಠದಲ್ಲಿ ಇಬ್ಬರು ಮಹಿಳಾ ನ್ಯಾಯಮೂರ್ತಿಗಳು ಇದೇ ಮೊದಲ ಬಾರಿಗೆ ಬಂದಿದ್ದಾರೆ. ಪೀಠದ ಇನ್ನೊಬ್ಬ ಮಹಿಳಾ ನ್ಯಾಯಮೂರ್ತಿ ಗ್ಯಾನ ಸುಧಾ ಮಿಶ್ರಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT