ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ಬರಾವ್ ಅವಧಿ ವಿಸ್ತರಣೆ

Last Updated 9 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಡಿ. ಸುಬ್ಬರಾವ್ ಅವರ ಅಧಿಕಾರ ಅವಧಿಯನ್ನು ಸರ್ಕಾರ ಎರಡು ವರ್ಷಗಳ ಕಾಲ ವಿಸ್ತರಿಸಿದೆ.

ಅಮೆರಿಕದ ಸಾಲ ಯೋಗ್ಯತೆ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ, ಇಡಿ ಜಗತ್ತೇ ಮತ್ತೊಮ್ಮೆ ಆರ್ಥಿಕ ಹಿಂಜರಿತದ ಭೀತಿ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ಅತ್ಯುತ್ತಮ ವಿತ್ತೀಯ ನೀತಿ ಕೈಗೊಳ್ಳವಂತೆ ಅವರಿಗೆ ಸೂಚಿಸಲಾಗಿದೆ.

`ಪ್ರಸಕ್ತ ಸಂದರ್ಭದಲ್ಲಿ ಆರ್‌ಬಿಐ ಗವರ್ನರ್ ಅವರ ಅಧಿಕಾರ ಅವಧಿ ವಿಸ್ತರಣೆ ಮಾಡಿರುವುದು ಒಳ್ಳೆಯ ನಿರ್ಧಾರ. ಸುಬ್ಬರಾವ್ ಉತ್ತಮ ಕೆಲಸ ಮಾಡಿದ್ದಾರೆ. ಸದ್ಯ ದೇಶದಲ್ಲಿ ಯಾವುದೇ ಆರ್ಥಿಕ ಅಸ್ಥಿರತೆ ಇಲ್ಲ ಎನ್ನುವುದನ್ನು ನಾವು ಖಾತ್ರಿಗೊಳಿಸಬೇಕಿದೆ~ ಎಂದು ಎಂದು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಪ್ರತಿಕ್ರಿಯಿಸಿದ್ದಾರೆ. 

2008ರ ಜಾಗತಿಕ ಆರ್ಥಿಕ ಹಿಂಜರಿತದ ನಂತರ, ದೇಶದ ಆರ್ಥಿಕ ಪುನಶ್ಚೇನದಲ್ಲಿ ಸುಬ್ಬರಾವ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ಅಧಿಕಾರ ಅವಧಿಯನ್ನು ಸೆಪ್ಟಂಬರ್ 5, 2013ರ ವರೆಗೆ ವಿಸ್ತರಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. 61 ವರ್ಷದ, ಮಾಜಿ `ಐಎಎಸ್~ ಅಧಿಕಾರಿಯಾಗಿರುವ ಸುಬ್ಬರಾವ್,  ಹಣಕಾಸು ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ಅಪಾರ ಅನುಭವ ಹೊಂದಿದ್ದಾರೆ.  2008ರಲ್ಲಿ ಅವರು `ಆರ್‌ಬಿಐ~ನ 22ನೇ ಗವರ್ನರ್ ಆಗಿ ನೇಮಕಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT