ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪತ್ರ: ಕ್ರಿಮಿನಲ್ ಮೊಕದ್ದಮೆ

ಬೆಳಗಾವಿ ವಿಧಾನಮಂಡಲ ಅಧಿವೇಶನ–2013
Last Updated 7 ಡಿಸೆಂಬರ್ 2013, 8:49 IST
ಅಕ್ಷರ ಗಾತ್ರ

ಸುವರ್ಣಸೌಧ (ಬೆಳಗಾವಿ): ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಕ್ರಮ ಕೈಗೊಳ್ಳ ಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ತಾರಾ ಅನೂರಾಧ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿರುವ ಅವರು, ದಾಖಲೆ ಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಜಾತಿ ಪ್ರಮಾಣ ಪತ್ರ ನೀಡುವಂತೆ ತಹಸೀಲ್ದಾರ್ ಗಳಿಗೆ ಸೂಚಿಸಲಾಗು ವುದು ಎಂದು ತಿಳಿಸಿದ್ದಾರೆ.

ಆರ್.ಮೇಘನಾ ಎಂಬ ವಿದ್ಯಾರ್ಥಿನಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವೃತ್ತಿಪರ ಕೋರ್ಸ್ ಗೆ ಸೀಟು ಪಡೆದುಕೊಂಡಿದ್ದರು. ಆ ನಂತರ ಸೀಟು ರದ್ದುಪಡಿಸಿಕೊಂಡಿ ದ್ದಾರೆ. ಈ ಪ್ರಕ್ರಿಯೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಭಾಗಿಯಾಗಿದ್ದರೆ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದ್ದಾರೆ.

ನೀರಿನ ಸೌಲಭ್ಯ: ಪ್ರಸಕ್ತ ಸಾಲಿನಲ್ಲಿ ೧೦,೭೩೮ ಜನವಸತಿಗಳಿಗೆ ಪೂರ್ಣ ಪ್ರಮಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

ಬಿಜೆಪಿಯ ಗಣೇಶ ಕಾರ್ಣಿಕ್ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿರುವ ಅವರು, ಹಂತ ಹಂತವಾಗಿ ಎಲ್ಲ ಜನವಸತಿಗಳಲ್ಲಿ ಕುಡಿಯುವ ನೀರಿನ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿ ಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟಾರೆ ೫೯,೭೫೩ ಜನವಸತಿಗಳಿದ್ದು, ೫೫೮೧ ಜನವಸತಿ ಗಳಿಗೆ ಪೂರ್ಣ ಪ್ರಮಾಣದಲ್ಲಿ ಹಾಗೂ ೫೪೧೭೨ ಜನವಸತಿಗಳಿಗೆ ಭಾಗಶಃ ಪ್ರಮಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT