ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ಜಾತಿ ಪತ್ರ: ನೌಕರರ ವಜಾಕ್ಕೆ ಆಗ್ರಹ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಸುಳ್ಳು ಜಾತಿ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು.

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಜಿಲ್ಲೆಯಲ್ಲಿ ಇಬ್ಬರು ಪೊಲೀಸ್ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಪರಿವಾರ, ತಳವಾರ, ಕುರುಬ, ಬೆಸ್ತ ಜನಾಂಗದವರೂ ಹಿಂದುಳಿದ ವರ್ಗಗಳ ಸವಲತ್ತು ಪಡೆಯಲು ಅರ್ಹರು. ಇದನ್ನು ಸುಪ್ರೀಂಕೋರ್ಟ್ ಕೂಡ ಎತ್ತಿಹಿಡಿದಿದೆ.
 
ಆದರೆ ಈ ಅಧಿಕಾರಿಗಳಿಬ್ಬರು ಪರಿಶಿಷ್ಟ ಜಾತಿಯವರಿಗೆ ಮೀಸಲಾದ ಸವಲತ್ತು ಪಡೆದುಕೊಂಡಿದ್ದಾರೆ. ಇವರಿಬ್ಬರನ್ನು ಸೇವೆಯಿಂದ ವಜಾಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಮತ್ತು ಕೂಡಲೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪರಿಶಿಷ್ಟ ಜಾತಿಯವರಿಗೆ ಇರುವ  ಸವಲತ್ತುಗಳನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪಿಗಳಿಗೆ ಹೈಕೋರ್ಟ್ ನೋಟಿಸ್ ನೀಡಿರುವುದು ಸ್ವಾಗತಾರ್ಹ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಸಂಚಾಲಕ ಕೆ.ಪಿ.ರಾಜರತ್ನಂ ಹೇಳಿದರು.

ಮೂಡಿಗೆರೆ ತಾಲ್ಲೂಕು ಬಾಳೆಹೊನ್ನೂರು ಅರಣ್ಯ ವಲಯದ ಮಾಗುಂಡಿ ಶಾಖೆ ಅರಣ್ಯ ಇಲಾಖೆ ನೌಕರರೊಬ್ಬರು ದಲಿತರನ್ನು ನಿಂದಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಿ ಬೇರೆಡೆಗೆ ವರ್ಗಾಯಿಸಬೇಕು ಎಂದು ಅವರು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಬನ್ನೂರು ಬಿ.ರಘು, ತಾಲ್ಲೂಕು ಘಟಕ ಸಂಚಾಲಕ ಟಿ.ಎಲ್.ಗಣೇಶ್, ಶೃಂಗೇರಿ ಗೋಪಾಲ್, ನಾಗರಾಜ, ನಗರ ಘಟಕ ಸಂಚಾಲಕ ಕೆ.ಕುಮಾರ್ ಧರಣಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT