ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣ ಭೂಮಿ: ಆಯ್ಕೆ ಆರಂಭ

Last Updated 1 ಜೂನ್ 2011, 6:45 IST
ಅಕ್ಷರ ಗಾತ್ರ

ಹಾವೇರಿ: ಸುವರ್ಣ ಭೂಮಿ ಯೋಜನೆ ಯಡಿ ತಾಲ್ಲೂಕಿನಲ್ಲಿ 10 ಸಾವಿರ ರೂಪಾಯಿ ಸಹಾಯಧನ ವಿತರಣೆಗೆ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವ ಕಾರ್ಯಕ್ಕೆ ಮಂಗಳ ವಾರ ಚಾಲನೆ ನೀಡಲಾಯಿತು.

ಇಲ್ಲಿನ ತಾಲ್ಲೂಕು ಕೃಷಿ ಹುಟ್ಟುವಳಿ ಗಳ ಮಾರಾಟ ಸಹಕಾರಿ ಸಂಘದ ಆವರಣದಲ್ಲಿ ರೈತರ ಸಮ್ಮುಖದಲ್ಲಿ ಸುವರ್ಣ ಭೂಮಿ ಯೋಜನೆಗೆ ಚಾಲನೆ ನೀಡಿದ ಶಾಸಕ ನೆಹರೂ ಓಲೇಕಾರ ಮಾತನಾಡಿ, ಮುಖ್ಯಮಂತ್ರಿ ಯಡಿ ಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ರೈತರು ಬೀಜ ಹಾಗೂ ಗೊಬ್ಬರಕ್ಕಾಗಿ ಅಗತ್ಯ ಹಣಕ್ಕಾಗಿ ಬೇರೆಯವರ ಬಳಿ ಕೈಚಾಚಬಾರದೆಂಬ ಉದ್ದೆೀಶದಿಂದ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದು ದೇಶದಲ್ಲಿ ಪ್ರಪ್ರಥಮ ಬಾರಿಗೆ ಜಾರಿಗೊಳಿಸಿದ ಯೋಜನೆಯಾಗಿದೆ. ಪ್ರತಿ ತಾಲ್ಲೂಕಿನಲ್ಲಿ 10 ಸಾವಿರ ರೈತರನ್ನು ಮಾತ್ರ ಆಯ್ಕೆ ಮಾಡ ಲಾಗುತ್ತಿದೆ. ಹೀಗಾಗಿ ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ ಮಾತನಾಡಿ, ರೈತರು ಸರ್ಕಾರ ನೀಡುವ ಸಹಾಯಧನ ಪಡೆದು ಹೆಚ್ಚಿನ ಬೆಳೆ ಬೆಳೆಯಬೇಕು. ರೈತರು ಆರ್ಥಿಕ ವಾಗಿ ಸ್ವಾವಲಂಬಿಗಳಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಸಹಾಯಧನ ವಿತರಿಸಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದರು.

ತಾ.ಪಂ. ಅಧ್ಯಕ್ಷ ಚನ್ನಬಸಪ್ಪ ಅರಳಿ, ತಾಲ್ಲೂಕು ಕೃಷಿ ಹುಟ್ಟುವಳಿಗಳ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಗುರುಬಸಪ್ಪ ನವಲೆ, ತಾಲ್ಲೂಕು ಮಟ್ಟದ ಸುವರ್ಣ ಭೂಮಿ ಯೋಜನೆ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಶಿವಲಿಂಗು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಿ. ಪರಮೇಶ್ವರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಿ.ಸಿ.ಬಸವರಾಜಪ್ಪ ಮತ್ತಿತರರು ಹಾಜರಿದ್ದರು.

4,270 ರೈತರ ಆಯ್ಕೆ
ಸುವರ್ಣ ಭೂಮಿ ಯೋಜನೆಯ ಸಹಾಯಧನಕ್ಕೆ ತಾಲ್ಲೂಕಿನಲ್ಲಿ ಸಣ್ಣ ಹಾಗೂ ಅತಿಸಣ್ಣ ರೈತರಿಂದ ಒಟ್ಟು 17,974 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 4,270 ರೈತರನ್ನು ಮಂಗಳ ವಾರ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.

ತಾಲೂಕಿನಲ್ಲಿ ಹಾವೇರಿ, ಕರ್ಜಗಿ ಮತ್ತು ಗುತ್ತಲ ಹೋಬಳಿಗಳಿದ್ದು, ಪ್ರತಿ ಹೊಬಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಎಂಬ ವಿಭಾಗಗಳಲ್ಲಿ ಲಾಟರಿಯನ್ನು ವಿಂಗಡಿಸ ಲಾಗಿತ್ತು. ರೈತ ಮಹಿಳೆಯರಿಗೆ ಶೇ. 33ರಷ್ಟು ಆಯ್ಕೆ ಕಾಯ್ದಿಟ್ಟು ಉಳಿದ ಅರ್ಜಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಯಿತು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಿ. ಪರಮೇಶ್ವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT