ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣಸೌಧಕ್ಕೆ ಪಂಚಮಸಾಲಿ ಸಮಾಜ ಮುತ್ತಿಗೆ

Last Updated 1 ಡಿಸೆಂಬರ್ 2012, 20:44 IST
ಅಕ್ಷರ ಗಾತ್ರ

ಹುಬ್ಬಳ್ಳಿ: `ಲಿಂಗಾಯಿತ ಪಂಚಮಸಾಲಿ ಸಮಾಜವನ್ನು ಪ್ರವರ್ಗ 2-ಎಗೆ ಸೇರಿಸಬೇಕು ಎಂದು ಆಗ್ರಹಿಸಿ ವಿಧಾನ ಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಇದೇ 7ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು' ಎಂದು ಕೂಡಲಸಂಗಮ ಪಂಚಮಸಾಲಿ ಮಹಾಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

`ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಿ ಅನೇಕ ವರ್ಷಗಳಿಂದ ಎಲ್ಲ ಸರ್ಕಾರಗಳಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಯಾರೂ ಈ ಬೇಡಿಕೆಯನ್ನು ಈಡೇರಿಸಿಲ್ಲ. ಲಿಂಗಾಯಿತ ಸಮಾಜದ 17 ಪಂಗಡಗಳನ್ನು 2-ಎಗೆ ಸೇರಿಸಿರುವ ಸರ್ಕಾರಗಳು ಪಂಚಮಸಾಲಿ ಸಮಾಜದವರ ನೋವಿಗೆ ಸ್ಪಂದಿಸಿಲ್ಲ' ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

`ಪಂಚಮಸಾಲಿ ಸಮಾಜದ ಕೂಡಲಸಂಗಮ ಹಾಗೂ ಹರಿಹರ ಪೀಠ ಒಗ್ಗೂಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ. ಕೆಲವು ಮಂದಿಯ ಹಿತಕ್ಕಾಗಿ ಸಮಾಜದ ಪ್ರಗತಿ ಕಡೆಗಣಿಸಲು ಯಾರಿಗೂ ಇಷ್ಟವಿಲ್ಲ. ಇದೇ 7ರಂದು ಹಿರೇಬಾಗೇವಾಡಿಯಲ್ಲಿ ನಡೆಯಲಿರುವ ಪಾದಯಾತ್ರೆಗೆ ಹರಿಹರ ಪೀಠದ ಶ್ರೀಗಳನ್ನು ಆಹ್ವಾನಿಸಲಾಗುವುದು' ಎಂದರು.

ಲಿಂಗಾಯಿತ ಧರ್ಮವನ್ನು ಸ್ವತಂತ್ರ ಧರ್ಮವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದ್ದು ಇದಕ್ಕೆ ಪಂಚಮಸಾಲಿ ಸಮಾಜದ ಬೆಂಬಲ ಇದೆ' ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT