ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಕ್ಷ್ಮಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು

Last Updated 5 ಅಕ್ಟೋಬರ್ 2012, 8:25 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ ಮತ್ತು ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ.

ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ಒಟ್ಟು 28 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸ ಲಾಗಿದೆ. ಶೀಘ್ರದ್ಲ್ಲಲೇ ಇನ್ನೂ 60ರಿಂದ 80 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಪೊಲೀಸ್ ಕಮಿಷನರೇಟ್‌ನಲ್ಲಿ ಚಿಂತನೆ ನಡೆದಿದೆ.  

ಈ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾ ಒದಗಿಸುವ ಸೋಮೀಂದ್ರ ಮಾರ್ಕೆಟಿಂಗ್ ಸಂಸ್ಥೆಯ ಪ್ರತಿನಿಧಿಗಳು ನಗರ ಸಂಚಾರ ನಿರ್ವಹಣಾ ಕೊಠಡಿಯಲ್ಲಿ ಗುರುವಾರ ಪ್ರಾತ್ಯಕ್ಷಿಕೆ ನೀಡಿದರು. ಪೊಲೀಸ್ ಕಮಿಷನರ್ ಬಿ.ಎ. ಪದ್ಮನಯನ, ಜಿಲ್ಲಾಧಿಕಾರಿ ಸಮೀರ್ ಶುಕ್ಲಾ, ಪಾಲಿಕೆ ಆಯುಕ್ತ ವೈ.ಎಸ್.ಪಾಟೀಲ, ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಜೈನ್, ಡಿಸಿಪಿ ಶ್ರೀನಾಥ್ ಜೋಶಿ, ಎಸ್.ಎಂ.ಪ್ರತಾಪನ್, ಎಸಿಪಿಗಳಾದ ಎ.ಆರ್‌ಬಡಿಗೇರ, ಜಿ.ಎಂ.ದೇಸೂರ ಮತ್ತಿತರರು ಈ ವೇಳೆ ಹಾಜರಿದ್ದರು.

`ಸಂಸ್ಥೆಯ ಬಳಿ ಇರುವ ಸಾಮಾನ್ಯ ಸಿಸಿಟಿವಿ ಕ್ಯಾಮೆರಾ ಮತ್ತು ಸುಮಾರು 200 ಮೀಟರ್ ದೂರದವರೆಗೆ ಸೂಕ್ಷ್ಮವಾಗಿ ವೀಕ್ಷಿಸಬಹುದಾದ ಕ್ಯಾಮೆರಾಗಳನ್ನು ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಅಳವಡಿಸಿ ಪರದೆಯಲ್ಲಿ ಮೂಡುವ ದೃಶ್ಯಗಳ ಶುದ್ಧತೆಯನ್ನು ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಅಧಿಕಾರಿಗಳು ಗಮನಿಸಿದರು.

ರಸ್ತೆಯಲ್ಲಿ ಕರ್ತವ್ಯ ನಿರತ ಸಂಚಾರ ಪೊಲೀಸರ ಜೊತೆ ವಾಕಿಟಾಕಿ ಮೂಲಕ ಸಂಪರ್ಕಿಸಿ, ವಾಹನಗಳ ಸರಾಗ ಚಲನೆ, ಅವುಗಳ ನೋಂದಣಿ ಸಂಖ್ಯೆಯನ್ನು ಪರದೆಯಲ್ಲಿ ಗುರುತಿಸಲು ಸಾಧ್ಯವೇ ಎಂದೂ ವೀಕ್ಷಿಸಲಾಯಿತು. ಇನ್ನೂ ನಾಲ್ಕು ಪಟ್ಟು ಹೆಚ್ಚು ಸಾಮರ್ಥ್ಯದ ಮೆಗಾ ಫಿಕ್ಸೆಲ್ ಕ್ಯಾಮೆರಾಗಳಲ್ಲಿ ಲಭ್ಯವಾಗಬಹುದಾದ ದೃಶ್ಯಗಳನ್ನೂ ವೀಕ್ಷಿಸಿದ ಬಳಿಕ ನಗರದಲ್ಲಿ ಅಳವಡಿಸುವ ಕ್ಯಾಮೆರಾಗಳ ಕುರಿತು ಸೂಕ್ತ ನಿರ್ಧಾರಕ್ಕೆ ಬರಲು ತೀರ್ಮಾನಿಸಲಾಯಿತು.

`ಪೊಲೀಸ್ ಕಮೀಷನರ್ ಅವರ ಕೋರಿಕೆಯಂತೆ, ಇತ್ತೀಚೆಗೆ ಗಣೇಶೋತ್ಸವ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಗಾಗಿ ನಗರದ ಪ್ರಮುಖ ಪ್ರದೇಶಗಳಲ್ಲಿ 78 ಸಿಸಿಟಿವಿ ಕ್ಯಾಮೆರಾಗಳನ್ನು ಸಂಸ್ಥೆಯ ವತಿಯಿಂದ ಅಳವಡಿಸಲಾಗಿತ್ತು, ಹಾವೇರಿ, ರಾಣೆಬೆನ್ನೂರು, ಬೆಳಗಾವಿ ಮತ್ತಿತರ ಕಡೆಗಳಲ್ಲಿ ತಮ್ಮ ಸಂಸ್ಥೆಯ 80ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿವೆ~ ಎಂದು ಸೋಮೀಂದ್ರ ಸಂಸ್ಥೆಯ ಆಡಳಿತ ಪಾಲುದಾರ ಮೋಹನ ಎಸ್. ದೇಸಾಯಿ ತಿಳಿಸಿದರು.

ಗಣೇಶಪೇಟೆ, ದಾಜಿಬಾನಪೇಟೆ, ಮರಾಠ ಗಲ್ಲಿ, ದುರ್ಗದಬೈಲ್ ಮತ್ತಿತರ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಜೊತೆಗೆ ಅಪಘಾತ, ಕಳವು, ಸರ ಅಪಹರಣ ಮತ್ತಿತರ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯ. ಅಲ್ಲದೇ ಪ್ರಕರಣ ನಡೆದರೆ ಕ್ಯಾಮೆರಾಗಳಲ್ಲಿ ಚಿತ್ರೀಕರಣಗೊಂಡ ದೃಶ್ಯಗಳ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚಬಹುದು ಎಂದೂ ಸಭೆಯಲ್ಲಿ ಚರ್ಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT