ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಚ್ಯಂಕ ಶೀಘ್ರದಲ್ಲೇ 20 ಸಾವಿರಕ್ಕೆ?

Last Updated 2 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮುಂಬೈ ಷೇರು ಪೇಟೆ ಸಂವೇದಿ ಸೂಚ್ಯಂಕ ಶೀಘ್ರದಲ್ಲೇ 20 ಸಾವಿರ ಅಂಶಗಳನ್ನು ತಲುಪಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಹೇಳಿದೆ.

ಕೇಂದ್ರ ಸರ್ಕಾರ ಕೈಗೊಂಡಿರುವ ಆರ್ಥಿಕ ಸುಧಾರಣಾ ಕ್ರಮಗಳು, ಯೂರೋಪ್ ಬಿಕ್ಕಟ್ಟು ಇತ್ಯರ್ಥಕ್ಕೆ ಸಂಬಂಧಿಸಿದ ಧನಾತ್ಮಕ ಬೆಳವಣಿಗೆಗಳಿಂದ ಸೂಚ್ಯಂಕ ದಾಖಲೆ ಪ್ರಮಾಣದಲ್ಲಿ ಜಿಗಿಯುತ್ತಿದೆ. ಕಳೆದ ತಿಂಗಳು `ಎಫ್‌ಐಐ~ ಹೂಡಿಕೆದಾರರು ರೂ19 ಸಾವಿರ ಕೋಟಿ ಹೂಡಿಕೆ ಮಾಡಿದ್ದಾರೆ. ಇದು ಕಳೆದ 7 ತಿಂಗಳಲ್ಲೇ ಗರಿಷ್ಠ ಪ್ರಮಾಣದ ಹೂಡಿಕೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ಸೂಚ್ಯಂಕ ಶೀಘ್ರದಲ್ಲೇ 20 ಸಾವಿರ ಗಡಿ ತಲುಪಲಿದೆ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT