ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಫಿ, ಶರಣರಲ್ಲಿ ಸಾಮ್ಯತೆ:ಪುಸ್ತಕ ಹೊರತರಲು ಸಲಹೆ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಸಿಂದಗಿ (ವಿಜಾಪುರ ಜಿಲ್ಲೆ): ಸೂಫಿಗಳು ಮತ್ತು ಶರಣರಲ್ಲಿ ಸಾಮ್ಯತೆ ಇದೆ. ಇಂಥ ಮಹತ್ವದ ವಿಚಾರ ಸಂಕಿರಣಗಳ ಸಾರವನ್ನು  ಪುಸ್ತಕ ರೂಪದಲ್ಲಿ ಹೊರ ತರಬೇಕು ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಪಲತಿ ಪ್ರೊ. ಬಿ.ಆರ್. ಅನಂತನ್ ಸಲಹೆ ನೀಡಿದರು.

ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಂ. ಮನಗೂಳಿ ಕಲಾ ಮಹಾವಿದ್ಯಾಲಯವು ಇತಿಹಾಸ ವಿಭಾಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ಯು.ಜಿ.ಸಿ ಪ್ರಾಯೋಜಕತ್ವದ ರಾಷ್ಟ್ರಮಟ್ಟದ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ನಾಡಿನಲ್ಲಿ 10 ಸಾವಿರ ಸೂಫಿ ಸಂತರುಗಳಾಗಿ ಹೋಗಿದ್ದಾರೆ. ದೇಶದಲ್ಲಿ 15 ಕೋಟಿ ಮುಸ್ಲಿಮರಿದ್ದಾರೆ, ಅವರು ಭಾರತೀಯ ಸಂಸ್ಕೃತಿ, ಕಲೆ, ಸಂಗೀತ, ಶಿಕ್ಷಣ ಕ್ಷೇತ್ರಕ್ಕೆ ಅಗಾಧ ಕೊಡುಗೆ ಸಲ್ಲಿಸಿದ್ದಾರೆ. ಹೀಗಾಗಿ ಅವರ ಬಗ್ಗೆ ಇರಬಹುದಾದ ಪೂರ್ವಾಗ್ರಹ ಪೀಡಿತ ಮನೋಭಾವ ದೂರಾಗಬೇಕಿದೆ.

ವಿಜಾಪುರದ ಎರಡನೇ ಆದಿಲ್‌ಶಾಹಿ ಇಬ್ರಾಹಿಂ `ಜಗದ್ಗುರು~ ಎನಿಸಿಕೊಂಡಿದ್ದು, ಇವರ ಆಸ್ಥಾನದಲ್ಲಿ 300 ಹಿಂದೂ ಪಂಡಿತರಿದ್ದರು ಎಂದು  ಸಾನ್ನಿಧ್ಯ ವಹಿಸಿದ್ದ ಗದಗ ತೋಂಟದಾರ್ಯ ಮಠದ ಡಾ. ಸಿದ್ಧಲಿಂಗ ಶ್ರೀಗಳು ಹೇಳಿದರು. 

 ಮಾಜಿ ಸಚಿವ ಎಂ.ಸಿ.ಮನಗೂಳಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಸೋಮಶೇಖರ ವಾಲಿ ಹಾಜರಿದ್ದರು. ಪ್ರಾಚಾರ್ಯ ಕೆ.ಎಸ್. ಪಾಟೀಲ ಸ್ವಾಗತಿಸಿದರು. ಪ್ರೊ.ಬಿ.ಎನ್.ಪಾಟೀಲ ನಿರೂಪಿಸಿದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಪ್ರೊ.ಅರವಿಂದ ಮನಗೂಳಿ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT