ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ. 8 ರಿಂದ ರಾಜ್ಯಮಟ್ಟದ ಬ್ಯಾಡ್ಮಿಂಟನ್

Last Updated 4 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಹಾವೇರಿ: ರಾಜ್ಯ ಹಾಗೂ ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆ, ಸ್ಥಳೀಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ 10ನೇ ಬ್ಯಾಡ್ಮಿಂಟನ್ ಟೂರ್ನಿ ಸೆ.8ರಿಂದ 11ರ ವರೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

`19 ವರ್ಷದೊಳಗಿನವರ ಸಿಂಗಲ್ಸ್, ಡಬಲ್ಸ್, ಮುಕ್ತ ಸಿಂಗಲ್ಸ್, ಡಬಲ್ಸ್ ಹಾಗೂ ಮಿಕ್ಸಡ್ ಡಬಲ್ಸ್ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ~ ಎಂದು ಜಿಲ್ಲಾ ಬ್ಯಾಡ್ಮಿಂಟನ್ ಸಂಸ್ಥೆಯ ಗೌರವ ಕಾರ್ಯದರ್ಶಿ ಶಿವರಾಜ ಸಿ.ಮರ್ತೂರ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಧಾರವಾಡದ ಅಜೇಯ ಪಾಟೀಲ, ಬೆಂಗಳೂರಿನ ಶಿವಕುಮಾರ, ಅಮಿತ್, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ರಿಯಾಜ್  ಮುಂತಾದವರು ಗಮನ ಸೆಳೆಯಲಿದ್ದಾರೆ. ಬೆಂಗಳೂರಿನ ಆರ್.ಸುರೇಶ ಕುಮಾರ ಸೇರಿದಂತೆ ಐವರು ನಿರ್ಣಾಯಕರಾಗಿರುತ್ತಾರೆ, ಯೋನೆಕ್ಸ್ ಸನ್‌ರೈಸ್ ಕಂಪೆನಿ ಟೂರ್ನಿಯ ಪ್ರಾಯೋಜಕತ್ವವನ್ನು ವಹಿಸಿದೆ~  ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT