ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸೆಬಿ' 75ಅಧಿಕಾರಿಗಳ ನೇಮಕ

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ(ಸೆಬಿ) ಶೀಘ್ರದಲ್ಲೇ `ಎ' ಶ್ರೇಣಿಯ 75 ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಿದೆ.

ಅಕ್ರಮ ಹಣಕಾಸು ಚಟುವಟಿಕೆ ವಿರುದ್ಧ ಕ್ರಮ ಕೈಗೊಳ್ಳಲು, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲು `ಸೆಬಿ'ಗೆ ಇತ್ತೀಚೆಗೆ ಕೇಂದ್ರ ಸರ್ಕಾರ ಹೆಚ್ಚಿನ ಅಧಿಕಾರ ನೀಡಿತ್ತು. ಇದಕ್ಕಾಗಿ ಮೂರು ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿತ್ತು.

`ಹೆಚ್ಚಿನ ಅಧಿಕಾರ ಲಭಿಸಿರುವುದರಿಂದ ಕಾರ್ಯನಿರ್ವಹಣೆಗೆ ಹೆಚ್ಚಿನ ಮಾನವ ಸಂಪನ್ಮೂಲ ಅಗತ್ಯವಿದೆ. ದೇಶದಾದ್ಯಂತ ಸ್ಥಳೀಯ ಕಚೇರಿಗಳನ್ನು ತೆರೆಯಬೇಕಿದೆ. ಈ ಹಿನ್ನೆಲೆಯಲ್ಲಿ ಹೊಸ ನೇಮಕಾತಿ ನಡೆಯಲಿದೆ' ಎಂದು `ಸೆಬಿ' ಪ್ರಕಟಣೆ ತಿಳಿಸಿದೆ.
ಸದ್ಯ `ಸೆಬಿ'ಯಲ್ಲಿ 600 ಅಧಿಕಾರಿಗಳಿದ್ದಾರೆ. ವರ್ಷಾಂತ್ಯಕ್ಕೆ ಈ ಸಂಖ್ಯೆಯನ್ನು 1 ಸಾವಿರಕ್ಕೆ ಹೆಚ್ಚಿಸುವ ಗುರಿಯನ್ನು ಮಂಡಳಿ ನಿಗದಿಪಡಿಸಿದೆ

ಆ. 12ರಿಂದ 26ರ ನಡುವೆ `ಎ' ಶ್ರೇಣಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.  ಈ ಹುದ್ದೆಗಳಿಗೆ ವಾರ್ಷಿಕ ರೂ.11 ಲಕ್ಷ ವೇತನ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT