ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಂಟ್ ಜಾನ್ಸ್ ಸಂಸ್ಥೆಗೆ `ಒಬಾಮಾ-ಸಿಂಗ್' ಪ್ರಶಸ್ತಿ

Last Updated 4 ಜುಲೈ 2013, 20:11 IST
ಅಕ್ಷರ ಗಾತ್ರ

ಬೆಂಗಳೂರು:  ಸೇಂಟ್ ಜಾನ್ಸ್ ಸಂಶೋಧನಾ ಸಂಸ್ಥೆಯ ಪೌಷ್ಟಿಕ ವಿಭಾಗವು ಪ್ರತಿಷ್ಠಿತ ಒಬಾಮಾ- ಸಿಂಗ್ 21 ಶತಮಾನದ ಜ್ಞಾನಧಾರಿತ ಮುಂದಾಳತ್ವ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಅಮೆರಿಕ ಮತ್ತು ಭಾರತದ ಶೈಕ್ಷಣಿಕ ಪಾಲುದಾರಿಕಾ ಕಾರ್ಯಕ್ರಮದ ಭಾಗವಾಗಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಪೌಷ್ಟಿಕ ವಿಭಾಗವು ಹಾರ್ವಡ್ ಪಬ್ಲಿಕ್ ಹೆಲ್ತ್ ಸ್ಕೂಲ್‌ನ ಹಾರ್ವಡ್- ಭಾರತ ಪೌಷ್ಟಿಕ ವಿಭಾಗದೊಂದಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

ಇದರಿಂದ ಸಾರ್ವಜನಿಕ ಆರೋಗ್ಯ ವಿಚಾರಗಳ ಕುರಿತು ಸಂಶೋಧನೆ, ಆರೋಗ್ಯ ಕ್ಷೇತ್ರದಲ್ಲಿ ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಲಿದೆ. ಈ ಮೂರು ವರ್ಷಗಳ ಅವಧಿಯ ಪಾಲುದಾರಿಕೆಯು ಡಾ. ಕುರಿಯನ್ ರಾಜ್ ಮತ್ತು ಡಾ. ಅನುರಾ  ನೇತೃತ್ವದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT