ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತು ಸಮುದ್ರ ಯೋಜನೆ ಪರ್ಯಾಯ ಮಾರ್ಗ ಕಷ್ಟ

Last Updated 2 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪುರಾಣ ಪ್ರಸಿದ್ಧ ರಾಮ ಸೇತುವೆಗೆ ಹಾನಿ ಮಾಡದೇ ವಿವಾದಾತ್ಮಕ ಸೇತು ಸಮುದ್ರ ಯೋಜನೆಗೆ ಪರ್ಯಾಯ ಮಾರ್ಗ ಹುಡುಕುವುದು ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ಉನ್ನತ ಮಟ್ಟದ ಸಮಿತಿ ನೀಡಿರುವ ವರದಿಯನ್ನು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಎಂದು ಉನ್ನತ ಸಮಿತಿ ಹೇಳಿದೆ. ಸಮಿತಿ ನೀಡಿದ 37 ಪುಟಗಳ ವರದಿಯನ್ನು ಸಾಲಿಸಿಟರ್ ಜನರಲ್ ರೋಹಿಂಟನ್ ನಾರಿಮನ್ ಅವರು ಎಚ್.ಎಲ್.ದತ್ತು ಮತ್ತು ಸಿ.ಕೆ. ಪ್ರಸಾದ್ ಅವರನ್ನು ಒಳಗೊಂಡ ಪೀಠಕ್ಕೆ ಸಲ್ಲಿಸಿದರು.

ವಿವಾದಾತ್ಮಕ ಸೇತುಸಮುದ್ರ ಯೋಜನೆ ಕುರಿತು ವರದಿ ನೀಡುವಂತೆ ಪರಿಸರ ತಜ್ಞ ಆರ್.ಕೆ. ಪಚೌರಿ ಅವರ ನೇತೃತ್ವದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಮಿತಿಯೊಂದನ್ನು ನೇಮಕ ಮಾಡಿದ್ದರು.  ಈ ಬಗ್ಗೆ ವಿಚಾರಣೆ ಮಾಡಿದ ಪೀಠ ಯೋಜನೆ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಎಂಟು ವಾರಗಳ ಗಡುವು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT