ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಖಾತ್ರಿ ಕಾಯ್ದೆ: ನಿತೀಶ್ ಜತೆ ಚರ್ಚೆ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸೋಮವಾರ ಪಟ್ನಾದಲ್ಲಿ ಭೇಟಿ ಮಾಡಿ ನಾಗರಿಕರಿಗೆ ಸೇವೆಗಳ ಖಾತ್ರಿ ಕಾಯ್ದೆ ಕುರಿತು ಚರ್ಚೆ ನಡೆಸಿದರು.

ಎರಡು ದಿನಗಳ ಈ ಪ್ರವಾಸದಲ್ಲಿ ಸಚಿವರು, ಬಿಹಾರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ   ಮಂಗಳವಾರ ಈ ಕಾಯ್ದೆಯ ಕುರಿತು ಮಾತುಕತೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಮತ್ತು ಕೆಲವು ಹಿರಿಯ ಅಧಿಕಾರಿಗಳು ಸಚಿವರ ಜೊತೆ ತೆರಳಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಕಾಲಮಿತಿಯಲ್ಲಿ ದೊರೆಯುವಂತಾಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಇತ್ತೀಚೆಗೆ ನಾಗರಿಕರಿಗೆ ಸೇವೆಗಳ ಖಾತ್ರಿ ಕಾಯ್ದೆ ಜಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT