ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ

Last Updated 16 ಸೆಪ್ಟೆಂಬರ್ 2013, 10:47 IST
ಅಕ್ಷರ ಗಾತ್ರ

ರಾಯಚೂರು: ಇಲ್ಲಿನ ಮೆಥೋಡಿಸ್ಟ್‌ ಕೊಯಡ್‌ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೇರಿ ತಿಮೋಥಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಈಚೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೋಧಕ ಎ.ಸಂಸೋನ್‌ ಮಾತನಾಡಿ, ಸೇವಾ  ನಿವೃತ್ತಿ ಹೊಂದಿದ ಮೇರಿ ತಿಮೋಥಿ ಅವರು 35 ವರ್ಷ ಈ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವು­ದರೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಪಾಲ್ಗೊಳ್ಳಲು ಪ್ರೋತ್ಸಾಹಿಸಿ ಉತ್ತಮ ಶಿಕ್ಷಕರಾಗಿ ಕಾರ್ಯನಿರ್ವ­ಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಡಿ. ದಯಾನಂದ ಮಾತನಾಡಿ, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿದ್ದಾರೆ. ತಮ್ಮ ಸೇವೆಯನ್ನು ನಿಷ್ಠೆಯಿಂದ  ಸೇವೆ ಸಲ್ಲಿಸಿ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಬೋಧಕರಾದ ಸಿ. ಮಾರ್ಕ್, ಸಲ್ಮೋನ್‌  ಸ್ಯಾಂಸೋನ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಿ. ಯೇಸನ್ನ, ಪ್ರೌಢಶಾಲೆಯ ಮುಖ್ಯಾಧ್ಯಾಪಕ ಜಯಪಾಲ್ ಹಾಗೂ ಶಿಕ್ಷಕರಾದ ರಾಜು, ಸರಳ ಹಾಗೂ ವಿದ್ಯಾರ್ಥಿಗಳು ಹಾಗೂ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT