ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಮನೋಭಾವ ರೂಢಿಸಿಕೊಳ್ಳಿ

Last Updated 20 ಅಕ್ಟೋಬರ್ 2012, 5:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಪೊಲೀಸರು ತಮ್ಮ ಒತ್ತಡದ ಕರ್ತವ್ಯದ ಮಧ್ಯೆಯೂ ನ್ಯಾಯಯುತವಾಗಿ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ರಾಜ್ಯ ಪೊಲೀಸ್ ತರಬೇತಿ ವಿಭಾಗದ ಮಹಾನಿರೀಕ್ಷಕ ಎಸ್.ಪರಶಿವಮೂರ್ತಿ ಸಲಹೆ ನೀಡಿದರು.

ನಗರದ ಡಿಎಆರ್ ಮೈದಾನದಲ್ಲಿ ಶುಕ್ರವಾರ ನಡೆದ 8ನೇ ಪೊಲೀಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಮಾತನಾಡಿದರು.

ಜನರ ಜೀವನ ಸಹನೀಯವಾಗಿಸುವುದೇ ಪೊಲೀಸರ ಮುಖ್ಯ ಕರ್ತವ್ಯ. ಪೊಲೀಸ್ ಇಲಾಖೆಯು ಸಾರ್ವಜನಿಕರಿಗಾಗಿ ಇರುವ ಇಲಾಖೆ. ಸಾಮಾಜಿಕ ವ್ಯವಸ್ಥೆಯ ಭಾಗವಾಗಿರುವ ಪೊಲೀಸರು ಸಂವಿಧಾನದ ಆಶಯಗಳನ್ನು ಜಾರಿಗೆ ತರಲು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಇತ್ತೀಚೆಗೆ 3500 ಸಿವಿಲ್ ಪೊಲೀಸ್ ಮತ್ತು 3000 ಸಶಸ್ತ್ರ ಪೊಲೀಸರನ್ನು ನೇಮಕ ಮಾಡಿದೆ. ಪೊಲೀಸರಿಗೆ ತರಬೇತಿ ನೀಡುವುದು ಮಹತ್ವದ ಕೆಲಸ. ರಾಜ್ಯದಲ್ಲಿ 6 ಶಾಶ್ವತ ಪೊಲೀಸ್ ತರಬೇತಿ ಸಂಸ್ಥೆಗಳಿದ್ದು, ಹಲವು ಜಿಲ್ಲೆಗಳಲ್ಲಿ ತಾತ್ಕಾಲಿಕ ತರಬೇತಿ ಶಾಲೆಗಳಿವೆ. 1994ರಲ್ಲಿ ಆರಂಭವಾದ ಚಿಕ್ಕಮಗಳೂರು ತಾತ್ಕಾಲಿಕ ತರಬೇತಿ ಶಾಲೆಯು ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಪ್ರಶಂಸಿಸಿದರು.

ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಹೆಚ್ಚುವರಿ ಮಿತ್ರ ಹೆರಾಜೆ ಮಾತನಾಡಿ, ಇದುವರೆಗೆ 8 ತಂಡಗಳಿಗೆ ತರಬೇತಿ ನೀಡಲಾಗಿದೆ. ಈ ವರ್ಷ ಬಳ್ಳಾರಿ ಜಿಲ್ಲೆಯ ಪೊಲೀಸ್ ಪ್ರಶಿಕ್ಷಣಾರ್ಥಿಗಳು ತರಬೇತಿ ಪಡೆದಿದ್ದಾರೆ. ಇವರಲ್ಲಿ ಹಲವರು ಉನ್ನತ ವಿದ್ಯಾಭ್ಯಾಸ ಪಡೆದಿದ್ದಾರೆ ಎಂದು ಹೇಳಿದರು.

 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್, ಆರ್‌ಪಿಐ ಬಸವರಾಜು ಇದ್ದರು.
8ನೇ ಪ್ರಶಿಕ್ಷಣ ತರಬೇತಿಯಲ್ಲಿ ರವಿ ಅವರು ಅತ್ಯುತ್ತಮ ಸಾಧನೆಗೈದು, ಪ್ರಥಮ ಬಹುಮಾನ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT