ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಕ್ಲಿಂಗ್‌ನಲ್ಲಿ ಕೆರ್ರಿ ಕಾಲಿಗೆ ಪೆಟ್ಟು

Last Updated 1 ಜೂನ್ 2015, 19:30 IST
ಅಕ್ಷರ ಗಾತ್ರ

ಜಿನೀವಾ (ಪಿಟಿಐ): ಸ್ವಿಟ್ಜರ್ಲೆಂಡ್‌ ಗಡಿಗೆ ಸಮೀಪದಲ್ಲಿರುವ ಫ್ರಾನ್ಸ್‌ನ ಸ್ಕಾನ್‌ಜೈರ್‌ನಲ್ಲಿ ಭಾನುವಾರ ನಡೆದ ಅಪಘಾತದಲ್ಲಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್‌ ಕೆರ್ರಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಜಾನ್‌ ಕೆರ್ರಿ ಅವರು ಪರಮಾಣು ಕಾರ್ಯಕ್ರಮದ ಕುರಿತು ಇರಾನ್‌ ರಾಯಭಾರಿಗಳೊಂದಿಗೆ ಚರ್ಚಿಸಲು ಜಿನೀವಾಕ್ಕೆ ತೆರಳಿದ್ದರು.  ಈ ವೇಳೆ ಸೈಕ್ಲಿಂಗ್‌ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಅವರ ಬಲ ತೊಡೆಯ ಎಲುಬು ಮುರಿದು ಹೋಗಿದೆ.

‘ಕೆರ್ರಿ ಅವರನ್ನು ಜಿನೀವಾ ವಿಶ್ವವಿದ್ಯಾ­ಲಯದ ಆಸ್ಪತ್ರೆಗೆ ದಾಖಲಿ­ಸಲಾಗಿದೆ. ಅವರ ಆರೋಗ್ಯದಲ್ಲಿ ಸ್ಥಿರತೆ ಇದ್ದು, ಪ್ರಜ್ಞೆ ಕಳೆದುಕೊಂಡಿಲ್ಲ. ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಮರಳಲಿದ್ದಾರೆ’ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT