ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಾ ಸವಾಲು ಅಂತ್ಯ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಪಾನ್ ಓಪನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಬೇಕೆಂಬ ಸೈನಾ ನೆಹ್ವಾಲ್ ಕನಸು ಭಗ್ನಗೊಂಡಿದೆ. ಭಾರತದ ಆಟಗಾರ್ತಿ ಸೆಮಿಫೈನಲ್‌ನಲ್ಲಿ ಅಚ್ಚರಿಯ ಸೋಲು ಅನುಭವಿಸಿದರು.

ಟೋಕಿಯೊದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಜರ್ಮನಿಯ ಜೂಲಿಯನ್ ಶೆಂಕ್ 21-19, 21-10 ರಲ್ಲಿ ಸೈನಾ ವಿರುದ್ಧ ಜಯ ಸಾಧಿಸಿ ಫೈನಲ್ ಪ್ರವೇಶಿಸಿದರು. ನಾಲ್ಕನೇ ಶ್ರೇಯಾಂಕ ಹೊಂದಿದ್ದ ಭಾರತದ ಆಟಗಾರ್ತಿ 39 ನಿಮಿಷಗಳಲ್ಲಿ ಶರಣಾದರು.

ಮೊದಲ ಸೆಟ್‌ನಲ್ಲಿ ತುರುಸಿನ ಪೈಪೋಟಿ ಕಂಡುಬಂತು. ಒಂದು ಹಂತದಲ್ಲಿ ಇಬ್ಬರೂ 19-19 ರಲ್ಲಿ ಸಮಬಲ ಸಾಧಿಸಿದ್ದರು. ಆ ಬಳಿಕ ಶೆಂಕ್ ಮೇಲುಗೈ ಸಾಧಿಸಿದರು. ಎರಡನೇ ಸೆಟ್‌ನಲ್ಲಿ ಆರಂಭದಲ್ಲಿ ಅಲ್ಪ ಹೋರಾಟ ಕಂಡುಬಂತು. ಉಭಯ ಆಟಗಾರ್ತಿಯರೂ 10-10 ರಲ್ಲಿ ಸಮಬಲ ಸಾಧಿಸಿದ್ದರು. ಈ ಹಂತದಲ್ಲಿ ಜರ್ಮನಿಯ ಆಟಗಾರ್ತಿ ಅದ್ಭುತ ಪ್ರದರ್ಶನ ನೀಡಿದರು. ಸತತ 11 ಪಾಯಿಂಟ್ ಗಿಟ್ಟಿಸಿ ಸೆಟ್ ಮಾತ್ರವಲ್ಲ, ಪಂದ್ಯವನ್ನೂ ತಮ್ಮದಾಗಿಸಿಕೊಂಡರು.

ಸೈನಾ ಮತ್ತು ಶೆಂಕ್ ಇದುವರೆಗೆ ಎಂಟು ಸಲ ಪರಸ್ಪರ ಎದುರಾಗಿದ್ದಾರೆ. ಭಾರತದ ಆಟಗಾರ್ತಿ 5-3 ರಲ್ಲಿ ಮೇಲುಗೈ ಪಡೆದಿದ್ದಾರೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸೈನಾ ಇದೇ ಮೊದಲ ಬಾರಿ ಶೆಂಕ್ ಕೈಯಲ್ಲಿ ಸೋಲು ಅನುಭವಿಸಿದ್ದಾರೆ. ಫೈನಲ್‌ನಲ್ಲಿ ಶೆಂಕ್ ಮತ್ತು ಚೀನಾದ ಯಿಹಾನ್ ವಾಂಗ್ ಪರಸ್ಪರ ಪೈಪೋಟಿ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT