ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಲ್‌ ವಿರುದ್ಧ ಆರೋಪಪಟ್ಟಿ ಸಲ್ಲಿಕೆ

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪೆನಿ ವಿರುದ್ಧದ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್‌ ಸೈಲ್‌ ಸೇರಿದಂತೆ 18 ಜನರ ವಿರುದ್ಧ ಸಿಬಿಐ ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದೆ.

ಬಳ್ಳಾರಿಯ ವಿವಿಧ ಸ್ಥಳಗಳಿಂದ 9 ಲಕ್ಷ ಟನ್‌ ಅದಿರನ್ನು ಅಕ್ರಮವಾಗಿ ತೆಗೆದು, ಮಲ್ಲಿಕಾರ್ಜುನ ಶಿಪ್ಪಿಂಗ್‌ ಕಂಪೆನಿ ರಫ್ತು ಮಾಡಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ವಿವರಿಸಲಾಗಿದೆ.

ಈ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT