ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊರಗಿದ ಚೆಲುವೆಯರು!

Last Updated 18 ಜುಲೈ 2012, 4:35 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ನರಿ ಯಂದಡ ಗ್ರಾಮಪಂಚಾಯತಿ ವ್ಯಾಪ್ತಿಯ ಚೇಲಾವರ ಗ್ರಾಮ ದಲ್ಲಿರುವ ಎರಡು ರಮಣೀಯ ಜಲಪಾತಗಳು ಪ್ರತಿವರ್ಷ ಮಳೆಗಾಲದ ಈ ಅವಧಿಗೆ ತಮ್ಮ ಚೆಲುವಿನಿಂದ ಪ್ರವಾಸಿಗರ ಮನಸೆಳೆ ಯುತ್ತಿದ್ದರೆ ಈ ವರ್ಷ ಜಲಪಾತದ ಭೋರ್ಗರೆತ ಕೇಳಿಸುತ್ತಿಲ್ಲ. ಮಳೆಯ ಕೊರತೆಯಿಂದ ಜಲಪಾತ ಸೊರಗಿವೆ.

ಕೊಡಗಿನ ಅತಿ ಎತ್ತರವಾದ ತಡಿಯಂಡಮೋಳ್ ಶಿಖರ, ಬ್ರಹ್ಮಗಿರಿ ಬೆಟ್ಟಸಾಲುಗಳು ಮುಗಿಲನ್ನು ಚುಂಬಿಸುತ್ತ ನಿಂತಿದ್ದರೆ ಈ ಬೆಟ್ಟಸಾಲುಗಳ ಕಣಿವೆಗಳಿಂದ ಹಲವಾರು ನದಿಗಳು ಉಗಮಿಸಿ ಹರಿದು ಬರುತ್ತವೆ. ಬ್ರಹ್ಮಗಿರಿ ಬೆಟ್ಟದ ಬುಡದಿಂದ ಕೊಡಗಿನ ಪವಿತ್ರ ನದಿ ಕಾವೇರಿ ಉಗಮಿಸುತ್ತಾಳೆ. ಇತ್ತ ತಡಿಯಂಡಮೋಳ್ ಶಿಖರದ ಸರ ಹದ್ದಿನಲ್ಲಿರುವ ಇಗ್ಗುತ್ತಪ್ಪ ಬೆಟ್ಟದಿಂದ ಬಲಿಯಟ್ರ ನದಿ ಮತ್ತು ಚೋಮ ಕುಂದು ಬೆಟ್ಟದಿಂದ ಸೋಮನ ನದಿ ಹರಿದು ಬರುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT