ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಶೇಖರ್ ಸ್ಥಳ ಪರಿಶೀಲನೆ

Last Updated 5 ಫೆಬ್ರುವರಿ 2011, 8:50 IST
ಅಕ್ಷರ ಗಾತ್ರ

ಬೇಲೂರು: ಇಲ್ಲಿನ ಶ್ರೀಚೆನ್ನಕೇಶವಸ್ವಾಮಿ ದೇವಾಲಯದ ರಸ್ತೆಗೆ ರಿಫ್ಲೆಕ್ಟರ್ ಅಳವಡಿಕೆ ಮಾಡುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಸೋಮಶೇಖರ್ ಅವರೊಂದಿಗೆ ಪುರಸಭಾಧ್ಯಕ್ಷ ಎಚ್.ಎಂ. ದಯಾನಂದ್ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅಧ್ಯಕ್ಷ ಎಚ್.ಎಂ.ದಯಾನಂದ್, ಬಸವೇಶ್ವರ ವೃತ್ತದಿಂದ ಚೆನ್ನಕೇಶವ ದೇವಾಲಯ ದವರೆಗಿನ ರಸ್ತೆ ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ರಿಫ್ಲೆಕ್ಟರ್ ಅಳವಡಿಸುವುದು ಹಾಗೂ ರಸ್ತೆಗೆ ಗೆರೆಪಟ್ಟಿಗಳನ್ನು ಹಾಕಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮಾರ್ಗದರ್ಶನ ದಲ್ಲಿ ಈ ಕಾರ್ಯ ಮಾಡಲು ನಿರ್ಧರಿಸಲಾಗಿದೆ. ಇದಕ್ಕೆ ಈಗಾಗಲೇ ಪುರಸಭೆಯ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದರು.

ಬೇಲೂರಿಗೆ ಭೇಟಿ ನೀಡುವ ಪ್ರವಾಸಿಗರು ಮತ್ತು ಸ್ಥಳೀಯರಿಗೆ ರಾತ್ರಿ ವೇಳೆಯಲ್ಲಿ ಪಟ್ಟಣದ ರಸ್ತೆ ಸುಂದರವಾಗಿ ಕಾಣಬೇಕೆಂಬ ಕಾರಣಕ್ಕಾಗಿ ಈ ಯೋಜನೆಯನ್ನು ರೂಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಮತ್ತು ಪುರಸಭೆಯ ಎಂಜಿನಿಯರ್‌ಗಳು ಒಟ್ಟಾಗಿ ಈ ಯೋಜನೆಗೆ ಸಂಬಂಧಿಸಿದಂತೆ ನಕ್ಷೆ ತಯಾರಿಸ ಲಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್.ಬಿ.ಮದನ್‌ಗೌಡ, ಪುರಸಭಾ ಸದಸ್ಯರಾದ ಎಂ.ಗುರುಪಾದಸ್ವಾಮಿ, ಸತ್ಯವೇಲು, ಗೌಸ್ ಷರೀಫ್, ಬಿ.ಡಿ.ಚನ್ನಕೇಶವ, ಮುಖ್ಯಾಧಿಕಾರಿ ಸುರೇಶ್ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT