ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ವಂಚಿತ ಹೂಗ್ಯಂ ಮೊರಾರ್ಜಿ ವಸತಿ ಶಾಲೆ

Last Updated 9 ಸೆಪ್ಟೆಂಬರ್ 2011, 9:15 IST
ಅಕ್ಷರ ಗಾತ್ರ

ರಾಮಾಪುರ: ಕಾಡಂಚಿನ ಗ್ರಾಮಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭಿಸಲಾದ ಕೊಳ್ಳೇಗಾಲ ತಾಲ್ಲೂಕಿನ ಹೂಗ್ಯಂ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹತ್ತಾರು ಸಮಸ್ಯೆಗಳ ಆಗರವಾಗಿದೆ.
2009ರಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇಲ್ಲಿನ ಲೋಕೋಪಯೋಗಿ ಇಲಾಖೆಯ ಅಥಿತಿ ಗೃಹದಲ್ಲಿ ತಾತ್ಕಾಲಿಕವಾಗಿ ಈ ಶಾಲೆಯನ್ನು ಪ್ರಾರಂಭಿಸಿತು. ಇಲ್ಲಿ 6ರಿಂದ 9ನೇ ತರಗತಿ ವರೆಗೆ ಸುಮಾರು 200 ವಿದ್ಯಾರ್ಥಿಗಳು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಪ್ರಸ್ತುತ 125 ವಿದ್ಯಾರ್ಥಿಗಳು ಮಾತ್ರ ಅಧ್ಯಯನದಲ್ಲಿ ತೊಡಗಿದ್ದಾರೆ. ವಸತಿ ಶಾಲೆಯಲ್ಲಿ ನಾಲ್ಕು ತರಗತಿಗಳಿದ್ದು, ಮಕ್ಕಳಿಗೆ ಅಗತ್ಯವಾದ ಹೆಚ್ಚುವರಿ ಕೊಠಡಿಗಳು ಇಲ್ಲ. ಮಕ್ಕಳು ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ, ಶೌಚಾಲಯ. ಸ್ನಾನ ಗೃಹಗಳು. ಇತ್ಯಾದಿ ಮೂಲ ಸೌಕರ್ಯಗಳು ಸಮರ್ಪಕವಾಗಿ ಇಲ್ಲದೆ ಮಕ್ಕಳ ದಾಖಲಾತಿ ಇಳಿಮುಖವಾಗುತ್ತಿದೆ. ಸೌಲಭ್ಯ ಇಲ್ಲದ ಈ ವಸತಿ ಶಾಲೆಗೆ ಮಕ್ಕಳನ್ನು ಸೇರಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ.

ಈಗ ಕೇವಲ 125 ಮಕ್ಕಳನ್ನು ಮಾತ್ರ ದಾಖಲು ಮಾಡಿಕೊಳ್ಳಲಾಗಿದೆ. ಉಳಿದ 75 ಮಕ್ಕಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯದಿಂದ ವಂಚಿತ ವಾಗಿದ್ದಾರೆ. ಜತೆಗೆ 8 ಜನ ಶಿಕ್ಷಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿ ಕೊಳ್ಳಲಾಗಿದೆ. ಇಷ್ಟು ವಿದ್ಯಾರ್ಥಿಗಳಿಗೆ ಅಗತ್ಯ ವಾದ ಅಡುಗೆ ಸಿಬ್ಬಂದಿ ಸಹ ಇದ್ದಾರೆ. ವಸತಿ ಶಾಲೆಯ ಮೇಲ್ವಿಚಾರಣೆಯನ್ನು ಹನೂರು ವಸತಿ ನಿಲಯ ಮೇಲ್ವಿಚಾರಕ ರಮೇಶ ಅವರು ನೋಡಿಕೊಳ್ಳುತ್ತಾರೆ.

ಶಾಲೆ ಪ್ರಾರಂಭಿಸಿ 3 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ. ಆರಂಭದ ದಿನದಿಂದ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ. ಇಲ್ಲಿಯೇ ಒಂದು ದಿನ ವಾಸ್ತವ್ಯ ಹೂಡಿ ವಿದ್ಯಾರ್ಥಿಗಳ ಗೋಳು ಕಣ್ಣಾರೆ ಕಂಡಿದ್ದಾರೆ.

ಆದರೂ ಸಹ ಶೀಘ್ರವಾಗಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳದೆ ಇರುವುದರಿಂದ ಈ ಭಾಗದ ಜನ  ಹಿಡಿ ಶಾಪ ಹಾಕುತ್ತಿದ್ದಾರೆ. ಆದಷ್ಟು ಬೇಗ ಕಟ್ಟಡ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT