ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯಗಳ ಕೊರತೆಯಿಂದ ಕ್ರೀಡಾ ಕೌಶಲ್ಯ ಕ್ಷೀಣ

Last Updated 21 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ರಾಮನಗರ:  ಮಕ್ಕಳಿಗೆ ಅಗತ್ಯವಾದ ಕ್ರೀಡಾ ಸೌಲಭ್ಯಗಳು ಮತ್ತು ಸಲಕರಣೆಗಳು ಸರಿಯಾಗಿ ದೊರೆಯದ ಕಾರಣ ಅವರ ಕ್ರೀಡಾ ಕೌಶಲ್ಯದಲ್ಲಿ ಕೊರತೆಗಳು ಕಾಣುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಲ್ಪನಾ ಮಲ್ಲಿಕಾರ್ಜುನೇಗೌಡ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿಯಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ವಿಭಾಗ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾಲಿಬಾಲ್ ಪಂದ್ಯಾವಳಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿ ಎಲ್ಲ ಮಕ್ಕಳಿಗೂ ಸಮರ್ಪಕವಗಿ ಕ್ರೀಡಾ ಸೌಲಭ್ಯಗಳು ಮತ್ತು ಸಲಕರಣೆಗಳು ದೊರೆತರೆ ಕ್ರೀಡಾ ಕೌಶಲ್ಯ ವೃದ್ಧಿಸಿಕೊಳ್ಳಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನ ಹರಿಸಬೇಕು ಎಂದು ಅವರು ಹೇಳಿದರು.

ಶಾಲೆಗಳ ದೈಹಿಕ ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಶಿಕ್ಷಣದ ಜತೆಗೆ ಕ್ರೀಡೆಗೂ ಸೂಕ್ತ ಪ್ರಾಶಸ್ತ್ಯವನ್ನು ನೀಡಬೇಕಿದೆ. ಸದೃಢ ಭಾರತ ನಿರ್ಮಿಸಲು ಯುವ ಶಕ್ತಿಯನ್ನು ರೂಪಿಸಬೇಕಿದೆ. ಕ್ರೀಡೆಗಳಲ್ಲಿ ಪಾಲ್ಗೊಂಡು ಕ್ರೀಡಾ ಮನೋಭಾವನೆ ಮೈಗೂಡಿಸಿಕೊಳ್ಳುವ ಯುವ ಜನತೆಯಿಂದ ಬಲಿಷ್ಠ ರಾಷ್ಟ್ರ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಅವರು ವಿವರಿಸಿದರು.

ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಸೋಲು ಮತ್ತು ಗೆಲುವನ್ನು ಒಂದೇ ಸಮನಾಗಿ ಸ್ವೀಕರಿಸಬೇಕು. ಸೋಲನ್ನು ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಬೇಕು ಎಂದ ಅವರು, ಕ್ರೀಡೆಯಿಂದ ಮಕ್ಕಳ ಆರೋಗ್ಯವೂ ಉತ್ತಮವಾಗಿರತ್ತದೆ ಎಂದರು.

ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ಮಾತನಾಡಿ, ಕ್ರೀಡೆಗೆ ಸರ್ಕಾರಗಳು ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಆ ಮೂಲಕ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳು ಹೊರಹೊಮ್ಮಲು ಸಹಕರಿಸಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಜಾತ ಶಿವಲಿಂಗಪ್ಪ, ಜಿ.ಪಂ ಸದಸ್ಯೆ ಶಾಂತಮ್ಮ, ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಪ್ರಹ್ಲಾದ್ ರಾವ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT