ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕ್ವಾಷ್: ಕ್ವಾರ್ಟರ್ ಫೈನಲ್‌ಗೆ ದೀಪಿಕಾ ಪಲ್ಲಿಕಲ್

Last Updated 16 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಕ್ಯಾನ್‌ಬೆರಾ (ಪಿಟಿಐ): ಭಾರತದ ದೀಪಿಕಾ ಪಲ್ಲಿಕಲ್ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಸ್ಕ್ವಾಷ್ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ನೀಡುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದರು.

ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ದೀಪಿಕಾ ಆರನೇ ಶ್ರೇಯಾಂಕದ ಆಟಗಾರ್ತಿ ಫ್ರಾನ್ಸ್‌ನ ಕ್ಯಾಮಿಲಾ ಸೆರ್ಮ್ ವಿರುದ್ಧ 3-1 ಅಂತರದ ಜಯ ಪಡೆದರು. ಇಲ್ಲಿ 11ನೇ ಶ್ರೇಯಾಂಕ ಹೊಂದಿರುವ ದೀಪಿಕಾ ಮೊದಲ ಗೇಮ್‌ಅನ್ನು 3-11 ರಲ್ಲಿ ಕಳೆದುಕೊಂಡರು. ಆ ಬಳಿಕ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ ಗೇಮ್‌ಗಳಲ್ಲಿ 11-9, 11-9, 11-6 ರಲ್ಲಿ ಜಯ ಪಡೆದು ಕ್ವಾರ್ಟರ್ ಫೈನಲ್‌ಗೆ ಮುನ್ನಡೆದರು.
ದೀಪಿಕಾ ಎಂಟರಘಟ್ಟದ ಪಂದ್ಯದಲ್ಲಿ ಅಮೆರಿಕದ ಅಮಂಡಾ ಸೊಬಿ ವಿರುದ್ಧ ಪೈಪೋಟಿ ನಡೆಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT