ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕ್ವಾಷ್: ದೀಪಿಕಾ ಪಲ್ಲಿಕಲ್‌ಚಾಂಪಿಯನ್

Last Updated 12 ಸೆಪ್ಟೆಂಬರ್ 2011, 19:00 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಭಾರತದ ಅಗ್ರ ರ‌್ಯಾಂಕಿಂಗ್‌ನ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಕ್ಯಾಲಿಫೋರ್ನಿಯದಲ್ಲಿ ನಡೆದ ಆರೆಂಜ್ ಕೌಂಟಿ ಓಪನ್ ಸ್ಕ್ವಾಷ್ ಟೂರ್ನಿಯಲ್ಲಿ ಚಾಂಪಿಯನ್ ಆದರು.

ಭಾನುವಾರ ನಡೆದ ಫೈನಲ್‌ನಲ್ಲಿ ದೀಪಿಕಾ 11-6, 12-10, 11-9 ರಲ್ಲಿ ಈಜಿಪ್ಟ್‌ನ ತತ್ರೆಬ್ ಅದೆಲ್ ವಿರುದ್ಧ ಗೆಲುವು ಪಡೆದರು. ವಿಶ್ವ ರ‌್ಯಾಂಕಿಂಗ್‌ನಲ್ಲಿ 24ನೇ ಸ್ಥಾನದಲ್ಲಿರುವ ಭಾರತದ ಆಟಗಾರ್ತಿಗೆ ಪ್ರಸಕ್ತ ವರ್ಷ ಲಭಿಸಿದ ಮೊದಲ ಪ್ರಶಸ್ತಿ ಇದಾಗಿದೆ.

ಸೆಮಿಫೈನಲ್‌ನಲ್ಲಿ ದೀಪಿಕಾ ಜಪಾನ್‌ನ ಮಿಸಾಕಿ ಕೊಬಯಶಿ ವಿರುದ್ಧ ಗೆಲುವು ಪಡೆದಿದ್ದರೆ, ಅದೆಲ್ ಅಮೆರಿಕದ ಲಟಾಶಾ ಖಾನ್ ಅವರನ್ನು ಮಣಿಸಿ ಅಚ್ಚರಿಗೆ ಕಾರಣರಾಗಿದ್ದರು. ದೀಪಿಕಾ ಟೂರ್ನಿಯುದ್ದಕ್ಕೂ ಪ್ರಭಾವಿ ಪ್ರದರ್ಶನ ನೀಡಿದರಲ್ಲದೆ, ಯಾವುದೇ ಸೆಟ್ ಕಳೆದುಕೊಳ್ಳದೆಯೇ ಚಾಂಪಿಯನ್‌ಪಟ್ಟ ತಮ್ಮದಾಗಿಸಿಕೊಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT