ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀಶಕ್ತಿ ಭವನಕ್ಕೆ ಭೂಧಾನ

Last Updated 20 ಫೆಬ್ರುವರಿ 2012, 7:45 IST
ಅಕ್ಷರ ಗಾತ್ರ

ಮುಂಡರಗಿ: `ಮುಂಡರಗಿ, ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿಗಳಲ್ಲಿ ಸ್ತ್ರೀಶಕ್ತಿ ಭವನಗಳು ಮಂಜೂರಾಗಿದ್ದು, ಮೊದಲ ಹಂತದಲ್ಲಿ ಮಾಜಿ ಸಚಿವ ಎಸ್.ಎಸ್.ಪಾಟೀಲ ಅವರು ತಮ್ಮ ತಾಯಿಯ ಹೆಸರಿನಲ್ಲಿ ನೀಡಿದ ಒಂದು ಎಕರೆ ಜಮೀನಿನಲ್ಲಿ ಮುಂಡರಗಿ ಪಟ್ಟಣದಲ್ಲಿ ಸ್ತ್ರೀಶಕ್ತಿ ಭವನ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು~ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಕಾರ್ಯಾ ಲಯಗಳು ಸಂಯುಕ್ತವಾಗಿ ಶುಕ್ರವಾರ ಪಟ್ಟಣದ ವಿವಿಧ ಭಾಗಗಳಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಮುಂಡರಗಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ತ್ರೀಶಕ್ತಿ ಭವನಕ್ಕೆ ಸರಕಾರದಿಂದ ಕೇವಲ 15ಲಕ್ಷರೂಪಾಯಿ ಮಂಜೂರಾಗಿದ್ದು, ಅಷ್ಟು ಕಡಿಮೆ ಹಣದಲ್ಲಿ ಬೃಹತ್ ಗಾತ್ರದ ಸ್ತ್ರೀಶಕ್ತಿ ಭವನ ನಿರ್ಮಿಸುವುದು ಅಸಾಧ್ಯವಾಗುತ್ತದೆ. ಆದ್ದರಿಂದ ಎಸ್‌ಜಿಎಸ್‌ವೈ ಯೋಜನೆಯ ಅಡಿಯಲ್ಲಿ ಹೆಚ್ಚಿನ ಅನುದಾನವನ್ನು ಪಡೆದುಕೊಂಡು ಪಟ್ಟಣದಲ್ಲಿ ದೊಡ್ಡ ಪ್ರಮಾಣದ ಕಟ್ಟಡವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು~ ಎಂದು ಅವರು ತಿಳಿಸಿದರು.

`ಕಳೆದ ಮೂರು ವರ್ಷಗಳ ಅವಧಿಯಲ್ಲಿ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮ ಗಾರಿಗಳನ್ನು ಕೈಗೊಳ್ಳಲು ಸರಕಾರದಿಂದ ಸುಮಾರು 18ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಅದರಿಂದ ಈಗಾಗಲೇ ಹಲವಾರು ಕಾಮಗಾರಿಗಳು ಪೂರ್ಣಗೊಂಡಿವೆ. ಬರಲಿರುವ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಇನ್ನೂ ಹಲವು ಕೋಟಿ ರೂಪಾಯಿ ಅನುದಾನ ಮಂಜೂರಾಗಲಿದ್ದು, ಅದರಲ್ಲಿ ಪಟ್ಟಣದ ಎಲ್ಲ ರಸ್ತೆಗಳಿಗೆ ಸಿಮೆಂಟ್ ಹಾಕಲಾಗುವುದು~ ಎಂದು ಅವರು ಭರವಸೆ ನೀಡಿದರು.

`ಪಟ್ಟಣದಲ್ಲಿ ನಿರ್ಮಾಣ ವಾಗಲಿರುವ ಸ್ತ್ರೀಶಕ್ತಿ ಭವನದಿಂದ ಮಹಿಳೆ ಮತ್ತು ಮಕ್ಕಳ ಚಟು ವಟಿಕೆಗಳಿಗೆ ತುಂಬಾ ಅನುಕೂಲ ವಾಗಲಿದ್ದು, ಕಟ್ಟಡದಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳು ದೊರೆಯುವಂತೆ ಮುಂಜಾಗ್ರತೆ ವಹಿಸಬೇಕು. ನೂತನವಾಗಿ ಕಟ್ಟಲಾಗಿರುವ ಅಂಗನವಾಡಿ ಕೇಂದ್ರ ಗಳನ್ನು ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಾರ್ವ ಜನಿಕರು ಸ್ವಚ್ಛವಾಗಿಟ್ಟುಕೊಳ್ಳಬೇಕು~ ಎಂದು ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಸಲಹೆ ನೀಡಿದರು. ಮಕ್ಕಳು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಎಚ್.ಚಂದ್ರಶೇಖರಯ್ಯ ಮಾತ ನಾಡಿದರು.

 ಪುರಸಭೆ ಅಧ್ಯಕ್ಷೆ ಶೇಖವ್ವ ಸಂಗಟಿ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಜಿ.ಪಂ.ಸದಸ್ಯ ಹೇಮಗಿರಿಶ ಹಾವಿನಾಳ, ತಾ.ಪಂ.ಅಧ್ಯಕ್ಷೆ ಅಕ್ಕಮಹಾದೇವಿ ಹಾರೊಗೇರಿ, ಉಪಾಧ್ಯಕ್ಷ ಪಿ.ಎಂ.ಪಾಟೀಲ, ಬಿಜೆಪಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಪುರಸಭೆ ಉಪಾಧ್ಯಕ್ಷ ಶಿವನಗೌಡ್ರ ಗೌಡ್ರ, ಮುಖಂಡರಾದ ರಜನೀಕಾಂತ ದೇಸಾಯಿ, ಚಿನ್ನಪ್ಪ ವಡ್ಡಟ್ಟಿ, ಪಾರವ್ವ ವಡ್ಡಟ್ಟಿ, ಚನ್ನಬಸವರಾಜ ಇಟಗಿ, ಸುರೇಶ ಮಳೆಕೊಪ್ಪ, ಮಂಜುನಾಥ ಇಟಗಿ, ಸೀತಾರಾಮರಾಜು, ಚಂದ್ರಕಾಂತ ಚಿಕ್ಕಣ್ಣವರ, ಎಂ.ಎನ್.ನಾಯಕ, ಪ್ರಭಾಕರ್ ವೇದಿಕೆಯ ಮೇಲೆ ಹಾಜರಿದ್ದರು.
 ಅಶೋಕ ಗೋಡಕಿಂಡಿ  ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT