ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರ ಸ್ಥಳಾಂತರಕ್ಕೆ ಜೆಡಿಎಸ್ ವಿರೋಧ

Last Updated 9 ಅಕ್ಟೋಬರ್ 2012, 8:50 IST
ಅಕ್ಷರ ಗಾತ್ರ

ಮಡಿಕೇರಿ: ದೇವರ ಕಾಡು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಅಲ್ಲಿ ವಾಸವಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ವಿ.ಪಿ.ಶಶಿಧರ್ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಕಾಡು ರಕ್ಷಣೆ ಮಾಡಲು ಪಕ್ಷದ ಸಹ ಮತವಿದೆ. ಆದರೆ ಅಲ್ಪ ಪ್ರಮಾಣದ ಜಾಗದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಕ್ರಮವನ್ನು ಅವರು ವಿರೋಧಿಸಿದರು.

ದೇವರ ಕಾಡು ಸೇರಿದಂತೆ ಇನ್ನಿತರ ಮಿಸಲು ಪ್ರದೇಶದಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಒತ್ತುವರಿಯಾಗಿರುವ ಭೂಮಿಯನ್ನು ತೆರವುಗೊಳಿಸಲಿ. ಆದರೆ ಸಾಮಾನ್ಯ ಜನತೆಗೆ ಸೂಕ್ತ ಮಾಹಿತಿ ನೀಡದೆ ಆತಂಕ ಉಂಟು ಮಾಡುತ್ತಿ ರುವುದನ್ನು ಅವರು ಖಂಡಿಸಿದರು.

ದೇವರ ಕಾಡು ರಕ್ಷಣೆಯ ವಿಷಯದಲ್ಲಿ ಬಿಜೆಪಿಯಲ್ಲಿರುವ ಗೊಂದಲವನ್ನು ಸರಿಪಡಿಸಿಕೊಂಡು, ಸೂಕ್ತ ನಿರ್ಧಾರ ಪ್ರಕಟಿಸಲಿ. ಆದರೆ ರಾಜಕೀಯ ಮೇಲಾಟಗಳು ಜನತೆಯ ಮೇಲೆ ಪ್ರಭಾವವನ್ನು ಬೀರುವುದು ಬೇಡ ಎಂದರು.
 ಹಾರಂಗಿ ಜಲಾಶಯದಿಂದ ನದಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಸಚಿವರಿಗೆ ನೈತಿಕತೆ ಇದ್ದರೆ ರಾಜಿನಾಮೆ ನೀಡಲಿ ಎಂದರು.

ಸಚಿವ ಅಪ್ಪಚ್ಚು ರಂಜನ್ ಅವರು ಜಿಲ್ಲೆಯಲ್ಲಿ ನಡೆಸುತ್ತಿರುವ ಜನಸ್ಪಂದನಾ ಸಭೆಯು ಕೇವಲ ಜನಜಂಗುಳಿಯ ಜಾತ್ರೆಯಾಗಿದೆ. ಹಲವು ವರ್ಷಗಳಿಂದ ಶಾಸಕರಾಗಿದ್ದ ಸಚಿವರಿಗೆ ಜನರ ಸಮಸ್ಯೆ ಅರಿಯಲು ಸಾಧ್ಯವಾಗಿಲ್ಲವೇ ಎಂದು ಪ್ರಶ್ನಿಸಿದರು.

ಜಿಲ್ಲೆಯ ಮಡಿಕೇರಿ, ಕುಶಾಲನಗರ ಸೇರಿದಂತೆ ಇನ್ನಿತರ ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿದ್ದು, ಈ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಿ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಮುನೀರ್ ಅಹಮದ್, ಅಶ್ರಫ್, ಜಿಲ್ಲಾ ಕಾರ್ಯದರ್ಶಿ ಕುಂಞಿ ಅಬ್ದುಲ್ಲಾ ಹಾಗೂ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT