ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಚ್ಛತೆ ಅರಿವು ಮೂಡಿಸಿದ ಜಿಲ್ಲಾಧಿಕಾರಿ

Last Updated 17 ಡಿಸೆಂಬರ್ 2012, 9:22 IST
ಅಕ್ಷರ ಗಾತ್ರ

ಕೃಷ್ಣರಾಜಪೇಟೆ: ಕೈಯಲ್ಲಿ ಕುಡುಗೋಲು ಹಿಡಿದು ಗಿಡಗಂಟಿಗಳನ್ನು ಕತ್ತರಿಸಿದ ತಹಶೀಲ್ದಾರರು... ಗುದ್ದಲಿ ಹಿಡಿದು ಕಸವನ್ನು ಬಳಿದ ಪುರಪಿತೃಗಳು... ಬೆಳಿಗ್ಗೆಯಿಂದಲೇ ಬೀದಿಗಳನ್ನು ಸ್ವಚ್ಛಗೊಳಿಸಿದ ಸ್ವಯಂ ಸೇವಕರು.. ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ ಜಿಲ್ಲಾಧಿಕಾರಿ.

ಇದು ತಾಲ್ಲೂಕು ಆಡಳಿತವು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪುರಸಭೆ ವ್ಯಾಪ್ತಿಯ ಹೊಸಹೊಳಲು ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿನ ಚಿತ್ರಣ.

ಶಾಸಕ ಕೆ.ಬಿ.ಚಂದ್ರಶೇಖರ್ ಮತ್ತು ತಹಶೀಲ್ದಾರ್ ಡಾ.ಎಚ್.ಎಲ್.ನಾಗರಾಜ್ ಅವರು ಸ್ವಚ್ಛತಾ ಆಂದೋಲನಕ್ಕೆ ಲಕ್ಷ್ಮೀನಾರಾಯಣಸ್ವಾಮಿ ದೇವಾಲಯದ ಬಳಿ ಭಾನುವಾರ ಬೆಳಿಗ್ಗೆ ಚಾಲನೆ ನೀಡಿದರು.

ಗ್ರಾಮದ ಎಲ್ಲಾ ವಾರ್ಡ್‌ಗಳಲ್ಲಿ ಸಂಚರಿಸಿದ ಸ್ವಯಂ ಸೇವಕರು ಅನುಪಯುಕ್ತ ಗಿಡಗಂಟಿಗಳನ್ನು ತೆರವುಗೊಳಿಸಿದರು. ಹೂಳು ತುಂಬಿದ್ದ ಚರಂಡಿಗಳನ್ನು ಶ್ವಚ್ಚಗೊಳಿಸಿದರು. ಮನೆಯ ಮುಂದಿನ ಆವರಣವನ್ನು, ಚರಂಡಿಗಳನ್ನು, ರಸ್ತೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.

ತಾಲ್ಲೂಕು ಆಡಳಿತದ ಕಾರ್ಯವನ್ನು ಶ್ಲಾಘಿಸಿದ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜನಪ್ರತಿನಿಧಿಗಳು ತಮ್ಮ ಕ್ಷೇತ್ರಗಳಿಗೆ ಕನಿಷ್ಠ ಮೂಲ  ಸೌಕರ್ಯಗಳನ್ನು ಒದಗಿಸಲು ಬದ್ಧರಾಗಿರಬೇಕೆಂದು ಸಲಹೆ ನೀಡಿದರು.

ಪುರಸಭೆ ಅಧ್ಯಕ್ಷೆ ಪುಟ್ಟಸಿದ್ದಮ್ಮ ಕುಮಾರ್, ಮುಖ್ಯಾಧಿಕಾರಿ ಶಿವಾನಂದ ಕರಾಳೆ, ತಾಲ್ಲೂಕು ಪಂಚಾಯಿತಿ ಪ್ರತಿಪಕ್ಷ ಮುಖಂಡ ರವೀಂದ್ರಬಾಬು, ಪರಸಭೆ ಸದಸ್ಯರಾದ ಮಂಜುಳಾ ಚನ್ನಕೇಶವ, ಎಚ್.ಜೆ.ಶ್ರೀನಿವಾಸ್, ಎಚ್.ಜಿ.ಗೋಪಾಲ್, ರಾಜು, ಪ್ರೌಢಶಾಲಾ ಮುಖ್ಯಶಿಕ್ಷಕ ಎಂ.ಕೆ.ಲಕ್ಷ್ಮೇಗೌಡ ಇತರರು ಹಾಜರಿದ್ದರು.

ತಾಲ್ಲೂಕಿನ ಆರೋಗ್ಯ ಇಲಾಖೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಪುರಸಭೆ ಕಾರ್ಮಿಕರು, ಭಾರತ್ ನಿರ್ಮಾಣ್ ಯೋಜನೆಯ ಸ್ವಯಂ ಸೇವಕರು, ಹೊಸಹೊಳಲು ಗ್ರಾಮದ ಸ್ವಯಂಸೇವಾ ಸಂಘಟನೆಗಳ ಪದಾಧಿಕಾರಿಗಳು, ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಪುರಪಿತೃಗಳು ಶ್ರಮದಾನದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT