ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ

Last Updated 14 ಸೆಪ್ಟೆಂಬರ್ 2013, 6:25 IST
ಅಕ್ಷರ ಗಾತ್ರ

ಬೀದರ್: ಅಭಿವೃದ್ಧಿಯ ದೃಷ್ಟಿಯಿಂದ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಕೇಡರ್‌ನ ಉನ್ನತ ಹುದ್ದೆಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇರು­ವುದು ಅಗತ್ಯ ಎಂದು ಜಿಲ್ಲಾಧಿಕಾರಿ ಡಾ. ಪಿ.ಸಿ. ಜಾಫರ್ ಹೇಳಿದರು.
 
ವಿಶ್ವವಿದ್ಯಾಲಯ ಅನುದಾನ  ಆಯೋಗ (ಯುಜಿಸಿ)ದ ಸಹ­ಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನಗರದ ಕರ್ನಾಟಕ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆರು ತಿಂಗಳ ಅವಧಿಯ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.

  ‘ಉನ್ನತ ಹುದ್ದೆಗಳಲ್ಲಿ ಈ ಭಾಗ­ದವರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲದ ಕಾರಣ  ಇತರೆ ಭಾಗದವರು  ಇಲ್ಲಿಗೆ ಬಂದು ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ಥಳೀಯರು ಇದ್ದರೆ ಉತ್ತಮ’ ಎಂದರು.

‘ಹಿಂದುಳಿದ ಭಾಗದ ಅಭಿವೃದ್ಧಿಗೆ ಸರ್ಕಾರ ಅನುದಾನ ನೀಡುತ್ತಿದೆ. ಆದರೆ ಆ ಅನುದಾನ ಸದ್ಬಳಕೆಗೆ ಅಧಿಕಾರಿ ವರ್ಗ ಪ್ರಯತ್ನಿಸಬೇಕು. ಈ ಭಾಗದ ಪ್ರಗತಿಗೆ ಪೂರಕವಾಗಿ ಮೊದಲು ಈ ಭಾಗದವರು ಉನ್ನತ ಹುದ್ದೆಗಳನ್ನು ಪಡೆಯುವುದಕ್ಕೆ ಮುಂದಾ­­ಗಬೇಕು’ ಎಂದರು.

  ಅಧ್ಯಕ್ಷತೆ ವಹಿಸಿದ್ದ ಕೆಆರ್‌ಇ ಸಂಸ್ಥೆಯ ಅಧ್ಯಕ್ಷ ಡಾ. ಬಸವರಾಜ ಪಾಟೀಲ್, ಈ ಭಾಗದ ಅಭ್ಯರ್ಥಿಗಳು ಕಷ್ಟಪಟ್ಟು ಅಭ್ಯಸಿಸುವ ಮೂಲಕ ಉನ್ನತ ಹುದ್ದೆ­ಪಡೆಯಲು ಶ್ರಮಿಸಬೇಕು. ಪ್ರತಿಭಾ­ವಂತರು ಇದ್ದರೂ, ಮಾರ್ಗದರ್ಶನದ ಕೊರತೆ ಇದೆ ಎಂದು ಅಭಿಪ್ರಾಯ­ಪಟ್ಟರು.

  ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ತ್ಯಾಗರಾಜನ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುನೀಲ  ಪನ್ವಾರ್, ಕೆಆರ್ಇ ಸಂಸ್ಥೆ ಉಪಾಧ್ಯಕ್ಷ ಬಿ.ಜಿ. ಶೆಟಕಾರ್, ಕಾರ್ಯದರ್ಶಿ ಬಸವರಾಜ ಜಾಬಶೆಟ್ಟಿ, ಪ್ರಾಚಾರ್ಯ ಪ್ರೊ. ವಿಜಯಕುಮಾರ್ ಗಂಗು, ಪ್ರಮುಖ­ರಾದ ರೋಸಲಿನ ಲಿಲ್ಲನ್, ಪವನ­ಕುಮಾರ್ ಎಂ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT