ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೈಸ್ ಜೆಟ್ ತುರ್ತು ಭೂಸ್ಪರ್ಶ

Last Updated 3 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬೆಂಗಳೂರಿನ ಸಿಬ್ಬಂದಿ ಹಾಗೂ 137 ಪ್ರಯಾಣಿಕರಿದ್ದ ಸ್ಪೈಸ್ ಜೆಟ್ ವಿಮಾನ ಇಲ್ಲಿನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದಾಗಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

`ಬೆಂಗಳೂರಿನಿಂದ ಆಗಮಿಸಿದ್ದ ವಿಮಾನ ಮಧ್ಯಾಹ್ನ 12.21ರ ಹೊತ್ತಿಗೆ ತುರ್ತು ಭೂಸ್ಪರ್ಶ ಮಾಡಿತು. ಎಲ್ಲ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ~ ಎಂದು ವಿಮಾನ ನಿಲ್ದಾಣದ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಇಸ್ತಾಂಬುಲ್‌ನಿಂದ ಬಂದಿದ್ದ ಟರ್ಕಿ ವಿಮಾನವೊಂದು ಶುಕ್ರವಾರ ಬೆಳಗಿನ ಜಾವ ಇಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು. ಈ ವಾರ ಏರ್ ಇಂಡಿಯಾದ ಎರಡು ವಿಮಾನ  ತುರ್ತು ಭೂಸ್ಪರ್ಶ ಮಾಡಿದ್ದವು.

ರನ್‌ವೇ ಸ್ಥಗಿತ: ಭಾರಿ ಮಳೆಯ ಕಾರಣ ಶುಕ್ರವಾರ ಟರ್ಕಿ ವಿಮಾನಕ್ಕೆ ಭೂಸ್ಪರ್ಶ ಮಾಡಲು ತೊಂದರೆಯಾಗಿ ಮಣ್ಣಿನಲ್ಲಿ ಸಿಕ್ಕಿಕೊಂಡ ಕಾರಣ ಶನಿವಾರ ಸಂಜೆವರೆಗೂ ಮುಂಬೈ ವಿಮಾನ ನಿಲ್ದಾಣದ ಮುಖ್ಯ ರನ್‌ವೇ ಸ್ಥಗಿತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT