ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ ಖಂಡಿಸಿ ವಕೀಲರ ಪ್ರತಿಭಟನೆ

Last Updated 8 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ದೆಹಲಿ ಹೈಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ದೇಶದ ಆಂತರಿಕ ಸ್ವಾಯತ್ತತೆಗೆ ಹಾಗೂ ಭದ್ರತೆಗೆ ಹಿಡಿದ ಕೈಗನ್ನಡಿಯಾಗಿದ್ದು, ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಗುರುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.

ದೇಶದಲ್ಲಿ ನ್ಯಾಯಾಂಗಕ್ಕೆ ಹಾಗೂ ನ್ಯಾಯಾಲಯಗಳ ಸಮುಚ್ಚಯಕ್ಕೆ ಭದ್ರತೆ ಇಲ್ಲದಂತಹ ವಾತಾವರಣ ದಶಕಗಳಿಂದಲೂ ನಿರ್ಮಾಣವಾಗಿದೆ. ಹಾಗೆಯೇ ಈ ರೀತಿಯ ಘಟನೆಗಳು ಸಂಭವಿಸಿದಾಗ ಚರ್ಚೆಗಳಾಗಿ, ಮತ್ತೆ ಮರೆತು ಬಿಡುವ ಸನ್ನಿವೇಶಗಳು ಸೃಷ್ಟಿಯಾಗಿವೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನವನ್ನು ಎತ್ತಿ ಹಿಡಿಯುವ ಪ್ರತಿಯೊಂದು ಕಾರ್ಯಕ್ಕೂ ನ್ಯಾಯಾಂಗದ ಆದೇಶವನ್ನೇ ಕಾಯುತ್ತಿರುವಂತೆ ಈ ದೇಶದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನಡೆದುಕೊಳ್ಳುತ್ತಿವೆ. ರಾಷ್ಟ್ರಭಕ್ತಿಯಿಂದ ಸ್ವಯಂ ಆಗಿ ಸಂವಿಧಾನವನ್ನು ಎತ್ತಿ ಹಿಡಿಯುವ ಕಾರ್ಯದಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗಗಳು ಸಂಪೂರ್ಣ ವಿಫಲವಾಗಿವೆ ಎಂಬುದು ಜನಸಾಮಾನ್ಯರ ಅಭಿಪ್ರಾಯವಾಗಿದೆ. ಈ ಸತ್ಯವನ್ನು ಶಾಸಕಾಂಗ ಹಾಗೂ ಕಾರ್ಯಾಂಗ ಅರಿತುಕೊಳ್ಳಬೇಕು ಎಂದರು.

ನೂರಾರು ಜನರ ಸಾವು-ನೋವಿಗೆ ಕಾರಣವಾದ ಈ ಕೃತ್ಯದಲ್ಲಿ ಭಾಗಿಯಾದವರನ್ನು ಸಂಬಂಧಪಟ್ಟ ಸರ್ಕಾರ ಪತ್ತೆ ಹಚ್ಚಿ, ತಕ್ಷಣ ಅವರಿಗೆ ಶಿಕ್ಷೆಯಾಗುವ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯ ನೇತೃತ್ವವನ್ನು ಸಂಘದ ಅಧ್ಯಕ್ಷ ಎಚ್.ಆರ್. ಸೋಮಶೇಖರಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಬಿ. ದೇವೇಂದ್ರಪ್ಪ ಮತ್ತಿತರರು ವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT