ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ ಪ್ರಕರಣದ ಆರೋಪಿ ಉಸ್ಮಾನಿ ಪರಾರಿ

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಮುಂಬೈ (ಐಎಎನ್‌ಎಸ್‌): ಇಂಡಿ­ಯನ್‌ ಮುಜಾಹಿದೀನ್‌ ಸಂಘಟನೆಯ ಶಂಕಿತ ಸಂಚುಕೋರ ಅಫ್ಜಲ್‌ ಉಸ್ಮಾನಿ­ಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಕರೆದೊಯ್ಯು­ತ್ತಿ­ದ್ದಾಗ ಪೊಲೀಸರ ಕಣ್ತಪ್ಪಿಸಿ ಪರಾರಿಯಾ­ಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಸ್ಮಾನಿ 2008ರಲ್ಲಿ ಸೂರತ್‌ ಮತ್ತು ಅಹಮದಾಬಾದ್‌ ನಗರಗಳಲ್ಲಿ ನಡೆದ  ಸ್ಫೋಟ ಪ್ರಕರಣದಲ್ಲಿ ಭಾಗಿ­ಯಾ­­ಗಿದ್ದ ಆರೋಪವನ್ನು ಎದುರಿಸು­ತ್ತಿದ್ದ.

ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿ­ಗಳನ್ನು ರಾಯಗಡ ಜಿಲ್ಲೆಯ ತಲೋಜ ಜೈಲಿನಿಂದ ದಕ್ಷಿಣ ಮುಂಬೈನ ಸೆಷನ್ಸ್‌ ನ್ಯಾಯಾಲಯಕ್ಕೆ ಕರೆತರುವ ವೇಳೆಯಲ್ಲಿ ಘಟನೆ ನಡೆದಿದ್ದು, ಪೊಲೀಸರನ್ನು ಮುಜುಗರ­ಕ್ಕೀಡು ಮಾಡಿದೆ. ಉಸ್ಮಾನಿ ಪತ್ತೆಗೆ ಮುಂಬೈ ಪೊಲೀಸರು  ತಂಡ ರಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT