ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ: ಮೂವರ ಸಾವು

Last Updated 5 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ರೈಲಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಶಾಲಿಮಾರ್ ಎಕ್ಸಪ್ರೆಸ್ ರೈಲಿನಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಈ ಸ್ಫೋಟ ಸಂಭವಿಸಿದೆ. ತೊಬಾ ತೇಕ್ ಸಿಂಗ್ ಪ್ರದೇಶದ ಚಾಟಿಯಾನಾ ತಲುಪಿದಾಗ ಈ ಘಟನೆ ಜರುಗಿದೆ ಎಂದು ಸುದ್ದಿ ವಾಹಿನಿಗಳು ವರದಿ ಮಾಡಿವೆ

ಸುಮಾರು ಎಂಟು ಕೆ.ಜಿ ತೂಕದ ಸ್ಫೋಟಕ ತುಂಬಿದ್ದ ಬಾಂಬ್ ಅನ್ನು ಬೋಗಿಯೊಂದರ ಶೌಚಾಲಯದಲ್ಲಿ ಇಡಲಾಗಿತ್ತು. ಈ ರೈಲು ಖಾಸಗಿ ಕಂಪೆನಿಗೆ ಸೇರಿದ್ದು, ಅಪರಿಚಿತರಿಂದ ಬೆದರಿಕೆ ಕರೆಗಳು ಬಂದಿದ್ದವು. ಭಾರಿ ಮೊತ್ತದ ಹಣದ ಬೇಡಿಕೆ ಇಟ್ಟಿದ್ದ ಅವರು, ರೈಲು ಸ್ಫೋಟಿಸುವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT