ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರಕವಾಗಿ ನಿಜಲಿಂಗಪ್ಪ ನಿವಾಸ: ಸಿದ್ದರಾಮಯ್ಯ

Last Updated 10 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ಎಸ್‌.ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಸ್ಮಾರಕವಾಗಿ ಅಭಿವೃದ್ಧಿ­ಪಡಿಸ­ಲಾಗುವುದು ಎಂದು ಮುಖ್ಯ­ಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಿಜಲಿಂಗಪ್ಪನವರ 111ನೇ ಜನ್ಮ­ದಿನಾಚರಣೆ ನಿಮಿತ್ತ ವಿಧಾನಸೌಧದ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಮಂಗಳವಾರ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿವಾಸವನ್ನು ಸರ್ಕಾರದ ವಶಕ್ಕೆ ನೀಡಲು ರೂ. 2 ಕೋಟಿ  ಕೊಡುವಂತೆ ಅವರ ಕುಟುಂಬದವರು ಬೇಡಿಕೆ ಇಟ್ಟಿದ್ದರು. ಆ ಮೊತ್ತ  ನೀಡಿ ಮನೆಯನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದರು.

ನಿಗಮ – ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಶುರುವಾಗಿದ್ದು, ಆದಷ್ಟು ಬೇಗ ಪೂರ್ಣವಾಗಲಿದೆ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್‌.ಆಂಜ­­ನೇಯ ಮಾತನಾಡಿ, ನಿಜಲಿಂಗಪ್ಪ ಸಮಾಧಿ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗು­ವುದು ಎಂದು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆ ನಿಜಲಿಂಗಪ್ಪ ಅವರನ್ನು ಹೋಲುವುದಿಲ್ಲ. ಹೀಗಾಗಿ ಅದನ್ನು ಬದಲಾಯಿಸಬೇಕು ಎಂದು ಈ ಸಂದರ್ಭದಲ್ಲಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT