ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವ ಉದ್ಯೋಗ ಕೈಗೊಳ್ಳಲು ಸಲಹೆ

Last Updated 16 ಅಕ್ಟೋಬರ್ 2012, 7:25 IST
ಅಕ್ಷರ ಗಾತ್ರ

ಗದಗ: ಮಹಿಳೆಯರು ಸ್ವ ಉದ್ಯೋಗ ಕೈಗೊಳ್ಳುವ ಮೂಲಕ ಆರ್ಥಿಕ ಹಾಗೂ ಸ್ವಾವಲಂಬಿಯಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತೇಜುಸಾ ಮಿಸ್ಕಿನ್ ಸಲಹೆ ನೀಡಿದರು.

ಸ್ಥಳೀಯ ಕರಿಯಮ್ಮನ ಕಲ್ಲು ಬಡಾವಣೆಯಲ್ಲಿ ಇತ್ತೀಚೆಗೆ ಅಲಂಕಾರ ಬ್ಯೂಟಿ ಪಾರ್ಲರ್ ಉದ್ಘಾಟಿಸಿ ಮಾತ ನಾಡಿದ ಅವರು, ಸರ್ಕಾರದ ಸೌಲಭ್ಯ ಗಳನ್ನು ಸದುಪಯೋಗ ಪಡಿಸಿಕೊಳ್ಳ ಬೇಕು ಎಂದರು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಆಡಳಿತ ವ್ಯವಸ್ಥಾಪಕ ಅಜೀತ ಉಪಾಧ್ಯಾ ಮಾತನಾಡಿ, ಮಹಿಳೆಯರು ಕೈಗೊಳ್ಳುವ ಉದ್ಯೋಗದಲ್ಲಿ ಸಾರ್ಥಕತೆ ತಂದುಕೊಳ್ಳಬೇಕು. ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಸಾಲ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗ ಕೈಗೊಂಡು ಉತ್ತಮ ಜೀವನ ನಡೆಸಬೇಕು ಎಂದು ಹೇಳಿದರು.

ಕೆವಿಜಿ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಆರ್.ಕೆ. ಗುಡಿ ಮಾತನಾಡಿ, ಮಹಿಳೆಯರು ಕೀಳರಿಮೆಯನ್ನು ಬಿಟ್ಟು ಬಿಡಬೇಕು. ಉದ್ಯೋಗದಲ್ಲಿ ಶ್ರದ್ಧೆ, ಪ್ರಾಮಾಣಿಕತೆ ಮೈಗೂಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಶ್ರೇಷ್ಠ ಮಹಿಳೆಯಾಗಿ ಹೊರ ಹೊಮ್ಮಲು ಸಾಧ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT