ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಉದ್ಯೋಗಕ್ಕೆ ಉತ್ತೇಜನ ಅಗತ್ಯ

Last Updated 20 ಸೆಪ್ಟೆಂಬರ್ 2011, 8:30 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಸರ್ಕಾರಿ ಉದ್ಯೋಗಕ್ಕಾಗಿ ಅಲೆದಾಟ ಬಿಟ್ಟು ಸ್ವಯಂ ಉದ್ಯೋಗದ ಕಡೆ ಗಮನ ಹರಿಸುವ ನಿಟ್ಟಿನಲ್ಲಿ ಪದವಿ ವಿದ್ಯಾರ್ಥಿಗಳು ಮುಂದಿನ ಜೀವನ ರೂಪಿಸಿಕೊಳ್ಳಬೇಕು ಎಂದು ಶಿವಮೊಗ್ಗದ ಡಾ.ಎಂ.ಕೆ. ಪುರುಷೋತ್ತಮ್ ತಿಳಿಸಿದರು.

ಜಿಎಸ್‌ಬಿ ಸಮಾಜದ ವತಿಯಿಂದ ಈಚೆಗೆ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾಂಶುಪಾಲ ಪ್ರೊ.ಎಂ.ಕೆ. ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶೈಕ್ಷಣಿಕವಾಗಿ ಅನುಕೂಲತೆ ಹೊಂದಿರುವ ಪಟ್ಟಣದ ವಿದ್ಯಾರ್ಥಿಗಳಿಗೆ ಸಮನಾಂತರವಾಗಿ ಬೆಳೆಯಲು ಗ್ರಾಮೀಣ ವಿದ್ಯಾರ್ಥಿಗಳು ಆಂಗ್ಲ ಭಾಷೆಯನ್ನು  ಕಲಿತು ನಿರುದ್ಯೋಗ ಸಮಸ್ಯೆ ಎದುರಿಸಬೇಕು ಎಂದು ಕರೆ ನೀಡಿದರು. ಪ್ರೊ. ಕೆ.ಸಿ ಹಿರಿಯಣ್ಣಯ್ಯ ಪ್ರಾಸ್ತಾವಿಕ ಮಾತನಾಡಿದರು.

ಕಾಲೇಜು ಅಭಿವೃದ್ಧಿ ಸದಸ್ಯರಾದ ಆರ್.ಎಚ್. ಶ್ರೀನಿವಾಸ ಆಚಾರ್, ದೇವೇಂದ್ರಪ್ಪಗೌಡ, ರಿಯಾಜ್ ಆಹಮದ್, ಯೋಗೇಂದ್ರಪ್ಪ ಹಾಜರಿದ್ದರು.

ಸನ್ಮಾನ: ಕಳೆದ ಶೈಕ್ಷಣಿಕ ವರ್ಷದಲ್ಲಿ ಬಿಬಿಎಂ ವಿಭಾಗದಲ್ಲಿ ಹೆಚ್ಚು ಅಂಕಗಳಿಸಿದ ಚೈತ್ರಾ, ಬಿಂದುರಾಣಿ~ ತಸ್ಲಿಮಾಬಾನು ಅವರನ್ನು ಸನ್ಮಾನಿಸಲಾಯಿತು. ದಾಕ್ಷಾಯಣಿ ಸ್ವಾಗತಿಸಿದರು, ಬಿಂದುರಾಣಿ ಕಾರ್ಯಕ್ರಮ ನಿರೂಪಿಸಿದರು. ದರ್ಶನ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT