ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಆಂದೋಲನಕ್ಕೆ ಚಾಲನೆ

Last Updated 25 ಡಿಸೆಂಬರ್ 2012, 8:36 IST
ಅಕ್ಷರ ಗಾತ್ರ

ಮಸ್ಕಿ: ಮಸ್ಕಿಯಲ್ಲಿ ಐದು ದಿನಗಳ ಕಾಲ ನಡೆಯುವ ಸ್ವಚ್ಛತಾ ಆಂದೋಲನಕ್ಕೆ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜ್ಞಾನಪ್ರಕಾಶ ರಸ್ತೆ ಮೇಲಿನ ಕಸಗುಡಿಸಿ ಸೋಮವಾರ ಚಾಲನೆ ನೀಡಿದರು.

ರಾಯಚೂರು ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಜಂಟಿಯಾಗಿ ಈ ಆಂದೋಲನ ನಡೆಸಲಿವೆ. ಗ್ರಾಮ ಸ್ವಚ್ಛ ಇದ್ದರೆ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ಕಸವನ್ನು ನಾವೇ ತೆಗೆಯಬೇಕು ಅಂದಾಗ ಮಾತ್ರ ನಮ್ಮ ಊರು ಸುಧಾರಣೆಯಾಗಲು ಸಾಧ್ಯ ಎಂದು ಜ್ಞಾನಪ್ರಕಾಶ ತಿಳಿಸಿದರು.

ನಂತರ ಹಳೆಯ ಬಸ್‌ನಿಲ್ದಾಣದ ಬಳಿಯ ಸರ್ಕಾರಿ ಕೇಂದ್ರ ಶಾಲೆ ಮುಂದೆ ಸೇರಿದ್ದ ನೂರಾರು ಜನರ ಹಾಗೂ ವಿದ್ಯಾರ್ಥಿಗಳ ನಡುವೆ ಕಸಬರಿಗೆ ಹಿಡಿದ ಶಾಸಕ ಪ್ರತಾಪಗೌಡ ಪಾಟೀಲ ಮತ್ತಿತರರು ಕಸ ಗುಡಿಸಿದರು. ಕಸ ಗುಡಿಸುವ ಈ ಕಾರ್ಯದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಚ್.ಬಿ. ಮುರಾರಿ, ಮಹಾದೇವಪ್ಪಗೌಡ ಪೊಲೀಸ ಪಾಟೀಲ, ಜ್ಞಾನಪ್ರಕಾಶ, ತಾಲ್ಲೂಕು ಪಂಚಾಯ್ತಿ ಸದಸ್ಯ ಹನುಮಂತಪ್ಪ ಮೋಚಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕ್ರಪ್ಪ ಮೋಚಿ, ತಾಲ್ಲೂಕು ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವೀರಭದ್ರಪ್ಪ, ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಸ್. ಪಾಟೀಲ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹನುಮೇಶ ಕುಲಕರ್ಣಿ, ಪಂಚಾಯಿತಿ ಸಿಬ್ಬಂದಿ ಕೈಜೋಡಿಸಿದರು. ಗ್ರಾಮ ಪಂಚಾಯಿತಿ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT